ನಾಗ್ಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 6 ಮಂದಿ ದುರ್ಮರಣ

ಕಾರು ಮತ್ತು ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನಾಗ್ಪುರ: ಕಾರು ಮತ್ತು ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ಮಯೂರ್ ಇಂಗಳೆ (22), ವೈಭವ್ ಚಿಖಲೆ (32), ಸುಧಾಕರ್​ ಮಾನಕರ್​ (42), ವಿಠ್ಠಲ್ ತೋಟೆ (45), ಅಜಯ್ ಚಿಖಲೆ (40) ಮತ್ತು ರಮೇಶ ಹಲೊಂಡೆ ಎಂದು ಗುರುತಿಸಲಾಗಿದೆ. ಜಗದೀಶ್ ಧೋನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ನಾಗ್ಪುರ ಜಿಲ್ಲೆಯ ಕಟೋಲ್ ತಾಲೂಕಿನ ಮೆಂಡಿಪಥರ್ ಗ್ರಾಮದವರು ಎಂದು ತಿಳಿದು ಬಂದಿದೆ.

ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದಾಗ ಸೋಂಖಾಂಬ್ ಮತ್ತು ತಾರಾಬೋಡಿ ಗ್ರಾಮಗಳ ಮಧಅಯೆ ಟ್ರಕ್‌ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ.

ಮತ್ತೊಂದೆಡೆ, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿದ್ದಾರೆ. ಇದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ನಾಗ್ಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಜಗದೀಶ್​ನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com