ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು-ನಕ್ಸಲೀಯರ ಮಧ್ಯೆ ಎನ್ ಕೌಂಟರ್: ಸಿಆರ್ ಪಿಎಫ್ ಯೋಧ ಹುತಾತ್ಮ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಸಬ್-ಇನ್‌ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ ಮತ್ತು ಕಾನ್‌ಸ್ಟೆಬಲ್ ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಸಬ್-ಇನ್‌ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ ಮತ್ತು ಕಾನ್‌ಸ್ಟೆಬಲ್ ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ 165ನೇ ಬೆಟಾಲಿಯನ್‌ನ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಜಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಗ್ಗೆ 7 ಗಂಟೆ ಸುಮಾರಿಗೆ ಬೇದ್ರೆ ಕ್ಯಾಂಪ್‌ನಿಂದ ಉರಸಂಗಲ್ ಗ್ರಾಮದ ಕಡೆಗೆ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದರು. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಸಬ್ ಇನ್ಸ್ ಪೆಕ್ಟರ್ ಸುಧಾಕರ್ ರೆಡ್ಡಿ ಹುತಾತ್ಮರಾಗಿದ್ದು, ಕಾನ್ ಸ್ಟೇಬಲ್ ರಾಮು ಅವರಿಗೆ ಬುಲೆಟ್ ಗಾಯಗಳಾಗಿವೆ.

ಗುಂಡಿನ ಚಕಮಕಿ ನಿಂತ ನಂತರ, ನಾಲ್ವರು ಶಂಕಿತರನ್ನು ಸ್ಥಳದಿಂದ ಸುತ್ತುವರಿಯಲಾಯಿತು, ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಪ್ರದೇಶದಲ್ಲಿ ಶೋಧ ನಡೆಸುತ್ತಿದೆ ಎಂದು ಅವರು ಹೇಳಿದರು.ಗಾಯಗೊಂಡ ಕಾನ್‌ಸ್ಟೆಬಲ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com