ತಮಿಳುನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ

ತಮಿಳುನಾಡಿನ ಹಲವೆಡೆ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಿಂದೂ ಮಹಾಸಾಗರ ಹಾಗೂ ದಕ್ಷಿಣ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿದ್ದ ಚಂಡಮಾರುತ ಈಗ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ತಮಿಳುನಾಡಿನ ಹಲವೆಡೆ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಿಂದೂ ಮಹಾಸಾಗರ ಹಾಗೂ ದಕ್ಷಿಣ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿದ್ದ ಚಂಡಮಾರುತ ಈಗ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿದೆ.

ಈ ಹವಾಮಾನ ಪರಿಸ್ಥಿತಿಯಿಂದಾಗಿ ಭಾನುವಾರದಂದು ದಕ್ಷಿಣ ತಮಿಳುನಾಡಿನ ಹಲವೆಡೆ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. 

ತಮಿಳುನಾಡಿನ ನಾಗಪಟ್ಟಣಂ, ತಿರುವರೂರ್, ತಂಜಾವೂರು, ಪುದುಕೊಟ್ಟೈ, ರಾಮನಾಥಪುರಂ, ಶಿವಗಂಗೈ ಮತ್ತು ವಿರುದುನಗರ ಜಿಲ್ಲೆಗಳಲ್ಲಿ ಒಂದಲ್ಲ ಒಂದು ಕಡೆ ಭಾರೀ ಮಳೆಯಾಗುವ  ಸಂಭವವಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾನುವಾರ ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದೆ.

ಸೋಮವಾರ, ದಕ್ಷಿಣ ತಮಿಳುನಾಡಿನ ಹಲವೆಡೆ, ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡಿನ ರಾಮನಾಥಪುರಂ, ಶಿವಗಂಗೈ, ವಿರುದುನಗರ, ತಂಜಾವೂರು, ಪುದುಕೊಟ್ಟೈ ಮತ್ತು ಥೇಣಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com