ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. 
ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ಸೂರತ್: ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. 

ಟರ್ಮಿನಲ್ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಈ ಮೊದಲು ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ನಗರದ ಸಂಪರ್ಕ ಹಾಗೂ ವಾಣಿಜ್ಯ ಕ್ಷೇತ್ರವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಶ್ಲಾಘನೆ ಮಾಡಿದರು.

ಸೂರತ್ ವಿಮಾನ ನಿಲ್ದಾಣದ ಸಮಗ್ರ ಟರ್ಮಿನಲ್ ಕಟ್ಟಡವನ್ನು ಸ್ಥಳೀಯ ಸಂಸ್ಕೃತಿ ಹಾಗೂ ಪರಂಪರೆಯೂಂದಿಗೆ ವಿನ್ಯಾಸಗೊಳಿಸಲಾಗಿದ್ದು, ಸೂರತ್‌ನ ಮೂಲಸೌಕರ್ಯ ಹಾಗೂ ವಾಣಿಜ್ಯ ವೃದ್ಧಿಗೆ ಇದರಿಂದ ನೆರವಾಗಲಿದೆ. ಹೊಸ ಟರ್ಮಿನಲ್ ಪೀಕ್ ಅವರ್‌ನಲ್ಲಿ 1,200 ದೇಶೀಯ ಪ್ರಯಾಣಿಕರು ಮತ್ತು 600 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. 

353 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಸೂರತ್ ವಿಮಾನ ನಿಲ್ದಾಣದ ಹೊಸದಾಗಿ ಸಂಯೋಜಿತ ಟರ್ಮಿನಲ್ ಕಟ್ಟಡವು ಗಂಟೆಗೆ 1,200 ದೇಶೀಯ ಮತ್ತು 600 ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com