ಪುಣೆಯಲ್ಲಿ ಪಿಕ್ ಅಪ್ ವ್ಯಾನ್-ಆಟೋರಿಕ್ಷಾ ಮಧ್ಯೆ ಡಿಕ್ಕಿ: ಎಂಟು ಮಂದಿ ಸಾವು

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಲ್ಯಾಣ್ ನಾಸಿಕ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಪಿಕಪ್ ವ್ಯಾನ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಲ್ಯಾಣ್ ನಾಸಿಕ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಪಿಕಪ್ ವ್ಯಾನ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನ ಓತೂರ್ ಗ್ರಾಮದ ಕಲ್ಯಾಣ್ ನಾಸಿಕ್ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 8 ಜನರು ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಪಿಕಪ್ ವ್ಯಾನ್ ಮತ್ತು ಪ್ಯಾಸೆಂಜರ್ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ನಂತರ ಈ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಮೃತಪಟ್ಟರೆ, ಪಿಕ್-ಅಪ್ ವ್ಯಾನ್‌ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶ ಅಪಘಾತ: ಟೋಲ್ ಪ್ಲಾಜಾ ಬಳಿ ಟ್ರಕ್‌ಗೆ ಪಿಕ್-ಅಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮಧ್ಯಪ್ರದೇಶದಿಂದ ಪಿಕ್‌ಅಪ್‌ ಟ್ರಕ್‌ನಲ್ಲಿ ಕೆಲವರು ಪ್ರಯಾಣಿಸುತ್ತಿದ್ದು, ಕಾಟೇಹಾರಿ ಟೋಲ್ ಪ್ಲಾಜಾ ಬಳಿ ಭಾನುವಾರ ರಾತ್ರಿ ಟ್ರಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಇರಾಜ್ ರಾಜಾ ತಿಳಿಸಿದ್ದಾರೆ.

ಮೃತರನ್ನು ಅನಿರುದ್ಧ (2), ಪ್ರಿಯಾಂಕಾ (28), ನ್ಯಾನ್ಸಿ (16) ಮತ್ತು ಮುನ್ನಿ ದೇವಿ (50) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com