ಸಂಸತ್ತಿಗೆ ಅವಮಾನ: ಸದನದೊಳಗೆ ಭದ್ರತಾ ಲೋಪ ಕುರಿತು ಹೇಳಿಕೆ ನೀಡದ ಮೋದಿ, ಶಾ ವಿರುದ್ಧ ಸಿಬಲ್ ವಾಗ್ದಾಳಿ

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸದನದೊಳಗೆ ಮಾತನಾಡುವ ಬದಲು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ಸಂಸತ್ತಿಗೆ ಮಾಡಿದ ಅವಮಾನ ಎಂದು...
ಕಪಿಲ್ ಸಿಬಲ್
ಕಪಿಲ್ ಸಿಬಲ್
Updated on

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸದನದೊಳಗೆ ಮಾತನಾಡುವ ಬದಲು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ಸಂಸತ್ತಿಗೆ ಮಾಡಿದ ಅವಮಾನ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಸೋಮವಾರ ಹೇಳಿದ್ದಾರೆ.

ಡಿಸೆಂಬರ್ 13 ರ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಪಕ್ಷಗಳ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.

ಸಂಸತ್ ಭವನದ ಭದ್ರತೆಯು ಲೋಕಸಭೆ ಸಚಿವಾಲಯದ ಜವಾಬ್ದಾರಿಯಾಗಿದೆ ಮತ್ತು ಅದು ಸ್ಪೀಕರ್ ನಿರ್ದೇಶನವನ್ನು ಅನುಸರಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

"ಡಿಸೆಂಬರ್ 13 ಭದ್ರತಾ ಲೋಪ ಘಟನೆ ಕುರಿತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡುವ ಬದಲು, ನೀವಿಬ್ಬರೂ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದೀರಿ. ಇದು ಸಂಸತ್ತಿಗೆ ಮಾಡಿದ ಅವಮಾನ" ಎಂದು ಕಪಿಲ್ ಸಿಬಲ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com