ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುತ್ತಿಲ್ಲ ಅಡ್ವಾಣಿ, ಜೋಶಿ! ಇದೇ ಕಾರಣ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಮುಂದಿನ ತಿಂಗಳ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುತ್ತಿಲ್ಲ.
ಮುರಳಿ ಮನೋಹರ್ ಜೋಶಿ, ಎಲ್ ಕೆ ಅಡ್ವಾಣಿ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ
ಮುರಳಿ ಮನೋಹರ್ ಜೋಶಿ, ಎಲ್ ಕೆ ಅಡ್ವಾಣಿ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಮುಂದಿನ ತಿಂಗಳ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುತ್ತಿಲ್ಲ.

ಹೌದು. ಆರೋಗ್ಯ ಮತ್ತು ವಯಸ್ಸಿನ ಕಾರಣ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ ಎಂದು ದೇವಸ್ಥಾನದ ಟ್ರಸ್ಟ್ ಸೋಮವಾರ  ತಿಳಿಸಿದೆ. ಇಬ್ಬರೂ ಕುಟುಂಬದ ಹಿರಿಯರಾಗಿದ್ದು, ಅವರ ವಯಸ್ಸು ಪರಿಗಣಿಸಿ ಕಾರ್ಯಕ್ರಮಕ್ಕೆ ಬರದಂತೆ ಮನವಿ ಮಾಡಲಾಗಿತ್ತು, ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದರು. 

ಜನವರಿ 22 ರಂದು ನಡೆಯುವ ಮೂರ್ತಿ ಪ್ರತಿಷ್ಠಾಪನಾ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಜನವರಿ 15 ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಮತ್ತು 'ಪ್ರಾಣ ಪ್ರತಿಷ್ಠಾ' ಪೂಜೆಯು ಜನವರಿ 16 ರಿಂದ ಪ್ರಾರಂಭವಾಗಲಿದ್ದು, ಜನವರಿ 22 ರವರೆಗೆ ನಡೆಯಲಿದೆ ಎಂದು ಅವರು ಹೇಳಿದರು.

ಆಹ್ವಾನಿತರ ವಿವರವಾದ ಪಟ್ಟಿಯನ್ನು ನೀಡಿದ ರೈ, ಆರೋಗ್ಯ ಮತ್ತು ವಯೋಸಹಜ ಕಾರಣಗಳಿಂದಾಗಿ ಅಡ್ವಾಣಿ ಮತ್ತು ಜೋಶಿ ಅವರು ಸಮಾರಂಭಕ್ಕೆ ಹಾಜರಾಗದಿರಬಹುದು ಎಂದು ಹೇಳಿದರು. ಅಡ್ವಾಣಿ ಅವರಿಗೆ ಈಗ 96 ವರ್ಷವಾಗಿದ್ದು, ಮುಂದಿನ ತಿಂಗಳು ಜೋಶಿ ಅವರಿಗೆ 90 ವರ್ಷ ತುಂಬಲಿದೆ.

ಮಾಜಿ ಪ್ರಧಾನಿ ದೇವೇಗೌಡರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಸಮಾರಂಭಕ್ಕೆ ಸುಮಾರು 4,000 ಸಂತರು ಮತ್ತು 2,200 ಇತರ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಕಾಶಿ ವಿಶ್ವನಾಥ, ವೈಷ್ಣೋದೇವಿಯಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರು ಮತ್ತು ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನು ಸಹ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com