ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವ್ಲಾಖಾಗೆ ಜಾಮೀನು

ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಗೌತಮ್ ನವ್ಲಾಖಾ
ಗೌತಮ್ ನವ್ಲಾಖಾ
Updated on

ಮುಂಬೈ: ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಗೌತಮ್ ನವ್ಲಾಖಾ ಅವರು ನವೆಂಬರ್ 2022 ರಿಂದ ಮುಂಬೈನ ಸಾರ್ವಜನಿಕ ಗ್ರಂಥಾಲಯದಲ್ಲಿ ಗೃಹಬಂಧನದಲ್ಲಿದ್ದರು.

ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದ ನವಲಾಖಾ ಅವರ ಆರೋಗ್ಯ ಹದಗೆಟ್ಟ ಕಾರಣ ನವೆಂಬರ್ 10, 2022 ರಂದು ಅವರನ್ನು ಗೃಹಬಂಧನದಲ್ಲಿ ಇರಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.

ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಗೌತಮ್ ನವ್ಲಾಖಾ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದು, ಇದು ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ನಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com