ಪ್ರತಿಪಕ್ಷ ಸದಸ್ಯರ ಪ್ರತಿಭಟನೆ
ಪ್ರತಿಪಕ್ಷ ಸದಸ್ಯರ ಪ್ರತಿಭಟನೆ

92 ಸಂಸದರ ಅಮಾನತು ವಿರೋಧಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ

ಸಂಸತ್ತಿನ ಉಭಯ ಸದನಗಳ ಒಟ್ಟು 92 ವಿಪಕ್ಷ ಸಂಸದರನ್ನು ಪ್ರಸಕ್ತ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದರ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಮಂಗಳವಾರ ಸಂಸತ್ತಿನ ಒಳಗಡೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
Published on

ನವದೆಹಲಿ: ಸಂಸತ್ತಿನ ಉಭಯ ಸದನಗಳ ಒಟ್ಟು 92 ವಿಪಕ್ಷ ಸಂಸದರನ್ನು ಪ್ರಸಕ್ತ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದರ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಮಂಗಳವಾರ ಸಂಸತ್ತಿನ ಒಳಗಡೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್ ಮತ್ತಿತರರು ಪಾಲ್ಗೊಂಡರು.  

ಪ್ರಜಾಪ್ರಭುತ್ವ ಅಪಾಯದಲ್ಲಿದೆ, ನಾವು ಪಂಜರದಲಿಲ್ಲ ಎಂಬ ಭಿತ್ತಿಪತ್ರ ಹಿಡಿದ ಪ್ರತಿಭಟನಾಕಾರರು ಸಂಸತ್ ಭದ್ರತಾ ಲೋಪ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಅಲ್ಲ. ಸಂಸತ್ತಿನಲ್ಲಿ ಅನೇಕ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಬಯಸುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು. 

ಸಂಸತ್ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದ ಲೋಕಸಭೆಯ 33 ಮತ್ತು ರಾಜ್ಯಸಭೆಯ 45 ಸದಸ್ಯರು ಸೇರಿದಂತೆ ಒಟ್ಟು 78 ಸದಸ್ಯರನ್ನು ಸೋಮವಾರ ಅಮಾನತು ಮಾಡಲಾಗಿತ್ತು. ಇದಕ್ಕೂ ಮುನ್ನಾ 13 ಸದಸ್ಯರನ್ನು ಅಮಾನತು ಮಾಡಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com