ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ ನಡುವೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಸಂಸತ್ತಿನ ಆವರಣದಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಅವರನ್ನು ಅಣಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಇದನ್ನು ಚಿತ್ರೀಕರಿಸಿದ್ದಾರೆ. ಪ್ರತಿಭಟನಾನಿರತ ಸಂಸದರು ನಗುವಿನ ಅಲೆಯಲ್ಲಿ ತೇಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ವಿಡಿಯೋ ವೈರಲ್ ಆಗುತ್ತಿದೆ.
ಮತ್ತೊಂದೆಡೆ ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಧನಕರ್, ಸಂಸದರಾಗಿದ್ದುಕೊಂಡು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ. ರಾಹುಲ್‌ಗೆ ದೇವರು ಸ್ವಲ್ಪ ಬುದ್ದಿ ನೀಡಲಿ" ಎಂದು ಹೇಳಿದ್ದಾರೆ.
Advertisement