ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್ ಫರ್ನಾಂಡೀಸ್

ವಂಚಕ ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಸುಕೇಶ್ ಚಂದ್ರಶೇಖರ್ ಮತ್ತು ನಟಿ ಜಾಕ್ವೆಲಿನ್ ಫರ್ನಾಂಡಿಸ್
ಸುಕೇಶ್ ಚಂದ್ರಶೇಖರ್ ಮತ್ತು ನಟಿ ಜಾಕ್ವೆಲಿನ್ ಫರ್ನಾಂಡಿಸ್

ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್, ತನ್ನ ಬಗ್ಗೆ ಮಾಧ್ಯಮಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಹೇಳಿಕೆ ನೀಡದಂತೆ ತಕ್ಷಣವೇ ತಡೆ ನೀಡಬೇಕು ಎಂದು ಬಾಲಿವುಡ್ ನಟಿ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ನಟಿ ತನ್ನ ಮನವಿಯಲ್ಲಿ, ಮಂಡೋಲಿ ಜೈಲಿನ ಸೂಪರಿಂಟೆಂಡೆಂಟ್ ಗೆ ಮತ್ತು ದೆಹಲಿ ಪೋಲೀಸ್‌ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು)ಕ್ಕೆ ಚಂದ್ರಶೇಖರ್‌ಗೆ ತನ್ನ ಕುರಿತು ಯಾವುದೇ ಹೆಚ್ಚಿನ ಪತ್ರಗಳು, ಹೇಳಿಕೆಗಳು ಅಥವಾ ಸಂದೇಶಗಳನ್ನು ನೀಡಲು ಅನುಮತಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ಆರೋಪಿಯ ಹೇಳಿಕೆಯಿಂದ ನನ್ನ ಸುರಕ್ಷತೆ ಮತ್ತು ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬಾಲಿವುಡ್ ನಟಿ ಹೇಳಿಕೊಂಡಿದ್ದಾರೆ. ಅಲ್ಲದೆ ಇದು ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ.

ಮುಂದಿನ ವಿಚಾರಣೆಗಾಗಿ ನ್ಯಾಯಾಲಯವು ಪ್ರಕರಣವನ್ನು ಜನವರಿ 17ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com