ಮಧ್ಯಪ್ರದೇಶ ವಿಧಾನಸಭೆಯ ನೂತನ ಸ್ಪೀಕರ್ ಆಗಿ ನರೇಂದ್ರ ಸಿಂಗ್ ತೋಮರ್ ಆಯ್ಕೆ

ಮಾಜಿ ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ನರೇಂದ್ರ ಸಿಂಗ್ ತೋಮರ್ ಅವರು ಬುಧವಾರ ಮಧ್ಯಪ್ರದೇಶ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನರೇಂದ್ರ ಸಿಂಗ್ ತೋಮರ್
ನರೇಂದ್ರ ಸಿಂಗ್ ತೋಮರ್

ಭೋಪಾಲ್: ಮಾಜಿ ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ನರೇಂದ್ರ ಸಿಂಗ್ ತೋಮರ್ ಅವರು ಬುಧವಾರ ಮಧ್ಯಪ್ರದೇಶ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸ್ಪೀಕರ್ ಹುದ್ದೆಗ ತೋಮರ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್ ಹಾಗೂ ಇತರ ಶಾಸಕರು ಪ್ರಸ್ತಾವನೆಯನ್ನು ಬೆಂಬಲಿಸಿದರು.

ನಂತರ, ಹಂಗಾಮಿ ಸ್ಪೀಕರ್ ಗೋಪಾಲ್ ಭಾರ್ಗವ ಅವರು ತೋಮರ್ ಅವರು ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

16ನೇ ಮಧ್ಯಪ್ರದೇಶ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನವಾದ ಸೋಮವಾರ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಶಾಸಕ ತೋಮರ್ ಅವರು ನಾಮಪತ್ರ ಸಲ್ಲಿಸಿದ್ದರು.

ರಾಜ್ಯ ವಿಧಾನಸಭೆಯ ಮೊದಲ ಅಧಿವೇಶನ ಗುರುವಾರ ಮುಕ್ತಾಯವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com