ಮತ್ತೆ ಕೊರೋನಾ ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಿ ಎಂದ ಕೇಂದ್ರ ಸರ್ಕಾರ

ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ
ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಮಾಂಡವಿಯಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗೆ (ಆರೋಗ್ಯ) ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಸಚಿವಾಲಯ ಮತ್ತು ಇತರೆ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಮನ್ಸುಖ್ ಮಾಂಡವಿಯಾ ಅವರು, ಸೋಂಕು ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರದಿಂದಿರಬೇಕು. ರಾಜ್ಯಗಳಿಗೆ ಕೇಂದ್ರದಿಂದ ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ಹೇಳಿದರು.

ರಾಜ್ಯಗಳು ಆಸ್ಪತ್ರೆಯ ಸನ್ನದ್ಧತೆ, ಕಣ್ಗಾವಲು ಹೆಚ್ಚಿಸುವುದು ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವುದು ಮುಖ್ಯವಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್‌ಗಳನ್ನು ನಡೆಸಬೇಕು. ಹಬ್ಬಗಳ ಮುನ್ನ ಸೋಂಕು ತಡೆಗಟ್ಟುವ ಕ್ರಮಗಳನ್ನು ಆಯಾ ರಾಜ್ಯಗಳು ಕೈಗೊಳ್ಳಬೇಕೆಂದು ತಿಳಿಸಿದರು.

"ನಮ್ಮ ಸನ್ನದ್ಧತೆಯಲ್ಲಿ ಕೊರತೆ ಇರಬಾರದು. ಆರೋಗ್ಯವು ರಾಜಕೀಯದ ಕ್ಷೇತ್ರವಲ್ಲ. ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳ ಬೆಂಬಲಕ್ಕೆ ನಿಲ್ಲಲಿದೆ. ಎಲ್ಲಾ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವ ಸಮಯವಾಗಿದೆ ಇದಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com