ಡಬ್ಲ್ಯುಎಫ್ಐ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಸಂಜಯ್ ಸಿಂಗ್ (ಬಲಗಡೆ)
ದೇಶ
ಡಬ್ಲ್ಯುಎಫ್ಐ ಅಧ್ಯಕ್ಷ ಹುದ್ದೆಗೆ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ
ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನವದೆಹಲಿ: ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ವಿಳಂಬವಾಗಿ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಸಿಂಗ್ ಪರೋಕ್ಷವಾಗಿ ಕ್ರೀಡಾ ಸಂಸ್ಥೆ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಈ ಹಿಂದೆ WFI ನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಂಜಯ್ ಸಿಂಗ್, ಚುನಾವಣೆಯಲ್ಲಿ 40 ಮತಗಳನ್ನು ಪಡೆದಿದ್ದಾರೆ, ಅವರ ವಿರುದ್ಧ ಸ್ಪರ್ಧಿಸಿದ್ದ ಅಭ್ಯರ್ಥಿಗೆ 7 ಮತಗಳು ಲಭಿಸಿದೆ.
ಪ್ರೇಮ್ ಚಂದ್ ಲೋಚಬ್ ದರ್ಶನ್ ಲಾಲ್ ಅವರನ್ನು ಸೋಲಿಸಿದ್ದರಿಂದ CWG ಚಿನ್ನದ ಪದಕ ವಿಜೇತ ಸಮಿತಿಯು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ