ಕುಸ್ತಿಪಟುಗಳ ಕಣ್ಣೀರಿಗೆ ಭಾರತ ತಕ್ಕ ಉತ್ತರ ನೀಡಲಿದೆ: ಕಾಂಗ್ರೆಸ್

ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಗದ ಕಾರಣ ದೇಶ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಕಾಂಗ್ರೆಸ್
ಕಾಂಗ್ರೆಸ್

ನವದೆಹಲಿ: ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಗದ ಕಾರಣ ದೇಶ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಹೇಳಿದೆ.

WFI ಮಾಜಿ ಮುಖ್ಯಸ್ಥ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು. ಅದಾಗ್ಯೂ ಡಬ್ಲುಎಫ್ಐಗೆ ಬ್ರಿಜ್ ಭೂಷಣ್ ಸಿಂಗ್ ಆಪ್ತ ಮುಖ್ಯಸ್ಥನಾಗಿ ಆಯ್ಕೆಯಾಗಿರುವುದಕ್ಕೆ ಕುಸ್ತಿಪಟು ಸಾಕ್ಷಿ ಮಲಿಕ್ ಕಣ್ಣೀರು ಸುರಿಸುತ್ತಾ ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು. 

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಗುರುವಾರ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, WFI ಮಾಜಿ ಮುಖ್ಯಸ್ಥನಿಂದ "ಕಿರುಕುಳ" ಅನುಭವಿಸಿದ ಸಹ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ತಾನು ಸೋತಿದ್ದೇನೆ ಎಂದು ಹೇಳಿ ಸಾಕ್ಷಿ ಮಲಿಕ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ತಮ್ಮ ಪ್ರತಿಭಟನೆಯ ಸಂದರ್ಭದಲ್ಲಿ ಗೃಹ ಸಚಿವರು ನ್ಯಾಯದ ಭರವಸೆ ನೀಡಿದರು. ಆದರೆ ಇಂದು ಬಿಜೆಪಿ ಆರೋಪಿ ಸಂಸದರನ್ನು ರಕ್ಷಿಸುವುದನ್ನು ಮುಂದುವರೆಸಿದೆ. ನಮ್ಮ ಕುಸ್ತಿಪಟುಗಳ ಕಣ್ಣೀರಿಗೆ ಭಾರತ ತಕ್ಕ ಉತ್ತರವನ್ನು ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.

ಈ ಕಣ್ಣೀರು ಮೋದಿ ಸರ್ಕಾರದ ಕೊಡುಗೆಯಾಗಿದೆ. ದೇಶದ ಪುತ್ರಿ ಸಾಕ್ಷಿ ಮಲಿಕ್ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಳು. ಸರ್ಕಾರದಲ್ಲಿರುವ ಎಲ್ಲ ಜನರನ್ನು ಭೇಟಿ ಮಾಡಿ, ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರಿಂದ ಲಾಠಿ ಏಟು ತಿನ್ನಬೇಕಾಗಿತ್ತು. ಆದರೆ ಇಂದು ನ್ಯಾಯ ಸಿಗದೆ ಅವರು ನಿವೃತ್ತಿ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ.

ಭಾರತ ಮತ್ತು ವಿದೇಶಗಳಲ್ಲಿ ತನ್ನ ಶಕ್ತಿಯನ್ನು ಸಾಬೀತುಪಡಿಸಿದ ದೇಶದ ಮಗಳು ಇಂದು "ನಾನು ಸೋತಿದ್ದೇನೆ" ಎಂದು ಹೇಳುತ್ತಿರುವುದು ದುರದೃಷ್ಟಕರ" ಎಂದು ಮಲಿಕ್ ಅಳುವ ವೀಡಿಯೊವನ್ನು ಕಾಂಗ್ರೆಸ್ ಶೇರ್ ಮಾಡಿದೆ.

ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಮಲಿಕ್ ಅವರ ಮೂವರು ಜನವರಿಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹೋರಾಟ ಪ್ರಾರಂಭಿಸಿದ್ದರು. ಡಬ್ಲ್ಯುಎಫ್‌ಐನಲ್ಲಿ ಸಿಬ್ಬಂದಿ ಬದಲಾವಣೆಗೆ ಆಕ್ರಮಣಕಾರಿಯಾಗಿ ಒತ್ತಾಯಿಸಿದರು. ಆದರೆ ಬಿಜೆಪಿ ಸಂಸದರ ನಿಕಟ ಸಹವರ್ತಿ ಈಗ ಚುಕ್ಕಾಣಿ ಹಿಡಿದಿದ್ದಾರೆ.

ವಾರಣಾಸಿಯಿಂದ ಬಂದಿರುವ ಉತ್ತರ ಪ್ರದೇಶ ಕುಸ್ತಿ ಅಸೋಸಿಯೇಷನ್ ಉಪಾಧ್ಯಕ್ಷ ಸಂಜಯ್ ಸಿಂಗ್ ಅವರು ತಮ್ಮ ಪ್ರತಿಸ್ಪರ್ಧಿ ಮತ್ತು 2010ರ ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ವಿರುದ್ಧ 40 ಮತಗಳನ್ನು ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com