ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವ ಯೋಜನೆ ಇಲ್ಲ: ಆರೋಗ್ಯ ಸಚಿವಾಲಯದ ಮೂಲಗಳು

ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸುವ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. 
ಕೋವಿಡ್ ಪರೀಕ್ಷೆ
ಕೋವಿಡ್ ಪರೀಕ್ಷೆ

ನವದೆಹಲಿ: ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸುವ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. 

ಕೋವಿಡ್ ನ ಜೆಎನ್1 ನ ರೂಪಾಂತರಿ ಸೋಂಕು ದೇಶಾದ್ಯಂತ ಹೆಚ್ಚಳವಾಗುತ್ತಿದ್ದು, ಸೋಂಕಿತರ ಪೈಕಿ ಶೇ.92 ರಷ್ಟು ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳವಿಲ್ಲ ಮತ್ತು ಇತರ ವೈದ್ಯಕೀಯ ಪರಿಸ್ಥಿತಿಗಳಿಂದ ಆಸ್ಪತ್ರೆಗೆ ದಾಖಲಾದ ಜನರಲ್ಲಿ ಕೋವಿಡ್-19 ಪ್ರಾಸಂಗಿಕವಾಗಿ ಕಂಡುಬಂದಿದೆ.

ಕಳೆದ ಎರಡು ವಾರಗಳಲ್ಲಿ, ದೇಶದಲ್ಲಿ COVID-19 ನಿಂದ 22 ಜನರು ಸಾವನ್ನಪ್ಪಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ಪ್ರಕಾರ ಭಾರತದಲ್ಲಿ ಗುರುವಾರ 594 ಹೊಸ COVID-19 ಸೋಂಕುಗಳು ವರದಿಯಾಗಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ  2,311 ರಿಂದ 2,669 ಕ್ಕೆ ಏರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com