ಮರೆಮಾಚಲು ಏನೂ ಇಲ್ಲ: ಇಡಿ ಸಮನ್ಸ್ ಗೆ ಕೇಜ್ರಿವಾಲ್ ಪ್ರತಿಕ್ರಿಯೆ

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಮೂಲಕ ಬದುಕಿದ್ದು, ಮರೆಮಾಚಲು ಏನೂ ಇಲ್ಲ ಎಂದು ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಗೆ ಬರೆದಿರುವ ಪತ್ರದಲ್ಲಿ ಉತ್ತರಿಸಿದ್ದಾರೆ. ಯಾವುದೇ ಕಾನೂನಾತ್ಮಕ ಸಮನ್ಸ್ ಸ್ವೀಕರಿಸಲು ಅವರು ಸಿದ್ದರಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. 

ಆಮ್ ಆದ್ಮಿ ಪಕ್ಷದ ನಾಯಕನಿಗೆ ಮೊದಲು ನವೆಂಬರ್ 2 ರಂದು ಸಮನ್ಸ್ ನೀಡಿ ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅವರು ಆ ಕರೆಯನ್ನು ತಿರಸ್ಕರಿಸಿ, ಮಧ್ಯಪ್ರದೇಶ ಚುನಾವಣೆಗೆ ಪ್ರಚಾರ ಮಾಡಲು ಆಯ್ಕೆ ಮಾಡಿದ್ದರು. ಆಮ್ ಆದ್ಮಿ ಪಕ್ಷವು ಸಮನ್ಸ್‌ನ ಸಮಯವನ್ನು ಪ್ರಶ್ನಿಸಿದ್ದು, ಪಕ್ಷದ ವಕೀಲರು ನೋಟಿಸ್  ಅಧ್ಯಯನ ಮಾಡುತ್ತಿದ್ದಾರೆ ಮತ್ತು "ಕಾನೂನುಬದ್ಧ" ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com