ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಕೆ ಪೊನ್ಮುಡಿಗೆ 3 ವರ್ಷ ಜೈಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಕೆ.ಪೊನ್ಮುಡಿ
ಕೆ.ಪೊನ್ಮುಡಿ

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

2006 ರಿಂದ 2011 ರ ಅವಧಿಯಲ್ಲಿ ಪೊನ್ಮುಡಿ ಅವರು ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಸುಮಾರು ಶೇ. 65.99 ಕ್ಕೂ ಹೆಚ್ಚಿನ ಆದಾಯ ಗಳಿಸಿದ್ದರು. ನ್ಯಾಯಾಲಯ ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

1.75 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ಅವರ ಪತ್ನಿಯನ್ನು ದೋಷಿಗಳು ಎಂದು ಮದ್ರಾಸ್ ಹೈಕೋರ್ಟ್ ಎರಡು ದಿನಗಳ ಹಿಂದೆ ತೀರ್ಪು ನೀಡಿ ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ. ಈ ಆದೇಶದಿಂದ ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಹೆಚ್ಚಿನ ಆದಾಯ ಗಳಿಸಿದ್ದರೂ 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಮಂಗಳವಾರ, ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧದ ಆರೋಪವು ಇಬ್ಬರೂ ಆರೋಪಿಗಳ ವಿರುದ್ಧ ಸಾಬೀತಾಗಿದೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ ಮರುದಿನವೇ ಪೊನ್ಮುಡಿಯವರಿಗೆ ಈ ಶಿಕ್ಷೆ ವಿಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com