ಗುಜರಾತ್ ಸರ್ಕಾರದಿಂದ 6 ರಿಂದ 8ನೇ ತರಗತಿಗೆ ಭಗವದ್ಗೀತೆ ಪೂರಕ ಪಠ್ಯಪುಸ್ತಕ ಬಿಡುಗಡೆ

ಮುಂದಿನ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳಿಗೆ 'ಭಗವದ್ಗೀತೆ' ಕುರಿತು ಪೂರಕ ಪಠ್ಯಪುಸ್ತಕವನ್ನು ಗುಜರಾತ್ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಹಮದಾಬಾದ್: ಮುಂದಿನ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳಿಗೆ 'ಭಗವದ್ಗೀತೆ' ಕುರಿತು ಪೂರಕ ಪಠ್ಯಪುಸ್ತಕವನ್ನು ಗುಜರಾತ್ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಈ ಕ್ರಮವು ಭಾರತದ ಶ್ರೀಮಂತ, ವೈವಿಧ್ಯಮಯ ಪ್ರಾಚೀನ ಸಂಸ್ಕೃತಿಯ ಕುರಿತು ವಿದ್ಯಾರ್ಥಿಗಳಿಗೆ ಕಲಿಸುವ ಗುರಿಯನ್ನು ಹೊಂದಿದೆ ಎಂದು ಸಚಿವರು ಹೇಳಿದ್ದಾರೆ. 

ಮೂರು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಚೌಕಟ್ಟಿನಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ರಾಜ್ಯ ಸಚಿವ ಪ್ರಫುಲ್ ಪನ್ಶೇರಿಯಾ ಅವರು ಹೇಳಿದ್ದಾರೆ.

NEP-2020ರ ಅಡಿಯಲ್ಲಿ ರಾಜ್ಯ ಶಿಕ್ಷಣ ಇಲಾಖೆಯು "ಶ್ರೀಮದ್ ಭಗವದ್ಗೀತೆ" ಯಲ್ಲಿನ ಆಧ್ಯಾತ್ಮಿಕ ತತ್ವಗಳು ಮತ್ತು ಮೌಲ್ಯಗಳನ್ನು 6 ರಿಂದ 8ನೇ ತರಗತಿಯ ಪಠ್ಯಕ್ರಮದಲ್ಲಿ ಪೂರಕ ಪಠ್ಯಪುಸ್ತಕವಾಗಿ ಸೇರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪನ್ಶೆರಿಯಾ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಧನ್ಯವಾದ ಅರ್ಪಿಸಿದ ಸಚಿವರು, "ಈ ಶೈಕ್ಷಣಿಕ ನಿರ್ಧಾರದ ಬಗ್ಗೆ ವಿದ್ಯಾರ್ಥಿಗಳು ಹೆಮ್ಮೆಪಡುತ್ತಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com