ದೇಶ

Covid-19: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ; 24 ಗಂಟೆಗಳಲ್ಲಿ  640 ಹೊಸ ಪ್ರಕರಣ

Covid-19: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ; 24 ಗಂಟೆಗಳಲ್ಲಿ  640 ಹೊಸ ಪ್ರಕರಣ
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಸದ್ಯ ಈವರೆಗೆ 4.50 ಕೋಟಿ (4,50,07,212) ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ ಮತ್ತೊಂದು ಸಾವು ವರದಿಯಾಗಿದ್ದು, ದೇಶದಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 5,33,328ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸದ್ಯ ಈವರೆಗೆ ದೇಶದಲ್ಲಿ 4,44,70,887 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. 

ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಒಟ್ಟು ಸೋಂಕು ಪ್ರಕರಣಗಳ ಪೈಕಿ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ಶೇ 1.19 ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.