ವಿರೋಧ ಪಕ್ಷದ ಸಂಸದರೇ ಅಮಾನತು ಮಾಡಲು ಹೇಳಿದ್ದರು: ಬಿಜೆಪಿ

ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ಸಾಗಿದ್ದು, ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಅಮಾನತು ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಂಡಿದೆ.
ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ಸಾಗಿದ್ದು, ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಅಮಾನತು ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಂಡಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶುಕ್ರವಾರ ಸಂಸತ್ತಿನ ಉಭಯ ಸದನಗಳಿಂದ ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷದ ನಾಯಕರ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದ್ದು, ಅವರನ್ನು ಅಮಾನತು ಮಾಡಲು ವಿಪಕ್ಷಗಳ ಸಂಸದರೇ ಹೇಳಿದರು ಎಂದು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೋಶಿ, 'ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023, ಭಾರತೀಯ ನ್ಯಾಯ ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್, 2023 ಸೇರಿದಂತೆ ಒಟ್ಟು 19 ಮಸೂದೆಗಳನ್ನು ಗುರುವಾರ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಂಡಾಗ, ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ರಚಿಸಲಾದ ಗದ್ದಲದ ಮೇಲೆ 146 ಸಂಸದರನ್ನು ಅಮಾನತುಗೊಳಿಸಲಾಯಿತು ಎಂದು ಹೇಳಿದರು.

"ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, ಮೂರು ಮಸೂದೆಗಳು -- ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023, ಭಾರತೀಯ ನ್ಯಾಯ ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್, 2023 ಅನ್ನು ನಿನ್ನೆ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಚಳಿಗಾಲದ ಅಧಿವೇಶನದಲ್ಲಿ ಒಟ್ಟು 19 ಮಸೂದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಯಿತು ಎಂದು ಕೇಂದ್ರ ಸಚಿವರು ಹೇಳಿದರು.

ಸಂಸದರ ಅಮಾನತು ವಿಚಾರದಲ್ಲಿ ವಿಪಕ್ಷಗಳ ವಿರುದ್ಧ ಹರಿಹಾಯ್ದ ಜೋಶಿ, "ಅವರೇ ಬಂದು ಅಮಾನತು ಮಾಡಲು ಹೇಳಿದರು. ಕಾಂಗ್ರೆಸ್ ಪಕ್ಷವು ಅಂತಹ ಕೀಳು ಮಟ್ಟದ ತಂತ್ರವನ್ನು ಹೊಂದಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಂಸದರ ಅಮಾನತು ಕುರಿತು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. 'ವಿಧಾನಸಭಾ ಚುನಾವಣೆಯ ಸೋಲಿನ ನಂತರ ಉದ್ದೇಶಪೂರ್ವಕವಾಗಿ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸ್ಪೀಕರ್ ಸಂಸತ್ತಿನ ಕಾವಲುಗಾರ, ಲೋಕಸಭೆಯ ಸ್ಪೀಕರ್ ಭದ್ರತೆಯ ಹೊಣೆ ಎಂದು ಪದೇ ಪದೇ ಹೇಳುತ್ತಿದ್ದಾರೆ, ಸ್ಪೀಕರ್ ಹೇಳುವುದನ್ನು ಏಕೆ ನಂಬುತ್ತಿಲ್ಲ? ಅವರು ಉದ್ದೇಶಪೂರ್ವಕವಾಗಿ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಸೇಡು ತೀರಿಸಿಕೊಳ್ಳಲು ನೋಡುತ್ತಿದ್ದಾರೆ. ಅವರು ಆಂತರಿಕವಾಗಿ ಯೋಜಿಸುತ್ತಿದ್ದರು ಮತ್ತು ಅವರಿಗೆ ಅವಕಾಶ ಸಿಕ್ಕಿತು ಎಂದು ಮೇಘವಾಲ್ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com