ಚಿದಂಬರಂ ಅಧ್ಯಕ್ಷತೆಯಲ್ಲಿ 2024ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ!

2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.
ಪಿ ಚಿದಂಬರಂ
ಪಿ ಚಿದಂಬರಂ

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ.

ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷವು ಶೀಘ್ರದಲ್ಲೇ ಸಮಿತಿಗಳನ್ನು ರಚಿಸಲಿದೆ ಎಂದು ಹೇಳಿದ್ದರು. ಲೋಕಸಭೆ ಸ್ಥಾನಕ್ಕೆ ವೀಕ್ಷಕರನ್ನು ನೇಮಿಸುವುದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷವು ಸ್ಕ್ರೀನಿಂಗ್ ಸಮಿತಿಯನ್ನು ಸಹ ರಚಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com