ಸಂಸತ್ ಭದ್ರತಾ ಲೋಪ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ; ಪ್ರಲ್ಹಾದ ಜೋಶಿ

ಸಂಸತ್ತಿನ ಭದ್ರತಾ ಲೋಪ ಪ್ರಕರಣದ ತನಿಖೆಯ ಭಾಗವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ. 
ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ

ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದ ತನಿಖೆಯ ಭಾಗವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ.

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 13ರಂದು ನಡೆದ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ವರದಿ ಸಲ್ಲಿಸಿದ ನಂತರ ಮುಂದಿನ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದರು.

ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪವಾಗಿತ್ತು. ಕಲಾಪ ನಡೆಯುತ್ತಿರುವಾಗಲೇ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್ ಎಂಬ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್ ಕ್ಯಾನ್’ ಹಾರಿಸಿದ್ದರು. ಇದರಿಂದಾಗಿ, ಸದನದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಆ ಇಬ್ಬರು ಆರೋಪಿಗಳು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಡೆದ ಪಾಸ್‌ಗಳ ಆಧಾರದ ಮೇಲೆ ಸಂಸತ್ತಿಗೆ ಪ್ರವೇಶಿಸಿದ್ದರು. 

ಪ್ರತಾಪ್ ಸಿಂಹ ಮೈಸೂರಿನಿಂದ ಎರಡು ಅವಧಿಗೆ ಲೋಕಸಭಾ ಸದಸ್ಯರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com