ಪೂಂಚ್ ನಲ್ಲಿ ಭಯೋತ್ಪಾದಕರ ದಾಳಿ: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೂವರ ಶವ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುದಾಳಿ ನಡೆಸಿದ ಸ್ಥಳದ ಸಮೀಪ ಶುಕ್ರವಾರ ಅನುಮಾನಾಸ್ಪದವಾಗಿ ಮೂವರ ಶವ ಪತ್ತೆಯಾಗಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ಪೂಂಚ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುದಾಳಿ ನಡೆಸಿದ ಸ್ಥಳದ ಸಮೀಪ ಶುಕ್ರವಾರ ಅನುಮಾನಾಸ್ಪದವಾಗಿ ಮೂವರ ಶವ ಪತ್ತೆಯಾಗಿದೆ. ಉಗ್ರರ ದಾಳಿಯಲ್ಲಿ ಐವರು ಯೋಧರು ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರನ್‌ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಧೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್‌ನಲ್ಲಿ ಗುರುವಾರ ದಾಳಿ ನಡೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ನ ಜನರಲ್ ಆಫೀಸರ್ ಕಮಾಂಡಿಂಗ್ ಲೆಫ್ಟಿನೆಂಟ್ ಜನರಲ್ ಸಂದೀಪ್ ಜೈನ್ ಮತ್ತು ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಅವರು ಹೊಂಚುದಾಳಿ ನಡೆದ ಸ್ಥಳವನ್ನು ಪರಿಶೀಲಿಸಿದರು. ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಭಯೋತ್ಪಾದಕರ ಪತ್ತೆಗೆ ದಟ್ಟ ಅರಣ್ಯದಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದರು.

ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ದರ್ಜೆಯ ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡವು ಕೂಡ ಹೊಂಚುದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದೆ ಆದರೆ. ಈ ಪ್ರಕರಣವನ್ನು ತನಿಖೆಗೆ ಸಂಸ್ಥೆಗೆ ನಿಯೋಜಿಸಲಾಗಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಫ್ಲಿಯಾಜ್‌ನ ಟೋಪಾ ಪೀರ್ ಗ್ರಾಮದ ಎಲ್ಲಾ ನಿವಾಸಿಗಳಾದ ಸಫೀರ್ ಹುಸೇನ್ (43), ಮೊಹಮ್ಮದ್ ಶೋಕೆಟ್ (27) ಮತ್ತು ಶಬೀರ್ ಅಹ್ಮದ್ (32) ನಿಗೂಢ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಅವರ ಸಾವಿಗೆ ಕಾರಣ ತಕ್ಷಣವೇ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್ ಡೆಪ್ಯುಟಿ ಕಮಿಷನರ್ ಚೌಧರಿ ಮೊಹಮ್ಮದ್ ಯಾಸಿನ್ ಮತ್ತು ಹಿರಿಯ ಪೊಲೀಸ್ ಅಧೀಕ್ಷಕ ವಿನಯ್ ಕುಮಾರ್ ಅವರು ಮೂವರ ಸಾವಿನ ವರದಿಗಳ ನಂತರ ಬುಫ್ಲಿಯಾಜ್ ತಲುಪಿದರು. ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ಸಹ ಸುರನ್ಕೋಟೆಗೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಶಸ್ತ್ರಸಜ್ಜಿತರಾಗಿದ್ದ ಮೂರರಿಂದ ನಾಲ್ಕು ಭಯೋತ್ಪಾದಕರು ಗುರುವಾರ ಮಧ್ಯಾಹ್ನ ಸೇನೆಯ ಮಾರುತಿ ಜಿಪ್ಸಿ ಮತ್ತು ಟ್ರಕ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು ಈ ವೇಳೆ ಐವರು ಸೈನಿಕರನ್ನು ಹುತಾತ್ಮರಾಗಿದ್ದು ಇಬ್ಬರು ಗಾಯಗೊಂಡಿದ್ದರು.

ದಾಳಿಯ ನಂತರ, ಭಯೋತ್ಪಾದಕರು ಕನಿಷ್ಠ ಇಬ್ಬರು ಸೈನಿಕರ ದೇಹಗಳನ್ನು ವಿರೂಪಗೊಳಿಸಿದ್ದಾರೆ. ಅಲ್ಲದೆ ಶಸ್ತ್ರಾಸ್ತ್ರಗಳನ್ನು ಹೊತೊಯ್ದಿದ್ದಾರೆ ಎಂದು ವರದಿಯಾಗಿದೆ. ಲೆಫ್ಟಿನೆಂಟ್ ಜನರಲ್ ಜೈನ್ ಗ್ರೌಂಡ್ ಝೀರೋಗೆ ಭೇಟಿ ನೀಡಿ ಉನ್ನತ ಸೇನೆ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com