ತೇಜಸ್ವಿ ಯಾದವ್‌ಗೆ ಇಡಿಯಿಂದ ಮತ್ತೆ ಸಮನ್ಸ್: ಜನವರಿ 5ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ

ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತೇಜಸ್ವಿ ಯಾದವ್
ತೇಜಸ್ವಿ ಯಾದವ್
Updated on

ನವದೆಹಲಿ: ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಹಿಂದೆ ಡಿಸೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಇಡಿ ಸಮನ್ಸ್ ದಿನನಿತ್ಯದ ವ್ಯವಹಾರ ಅಂತಾ ಹೇಳಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಲಾಲು ಪ್ರಸಾದ್ ಯಾದವ್ ಅವರು ಯುಪಿಎ-1ರ ಅವಧಿಯಲ್ಲಿ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ನಡೆದಿದ್ದ ಹಗರಣ ಇದಾಗಿದೆ.

2004 ರಿಂದ 2009 ರವರೆಗೆ ಆಗಿನ ರೈಲ್ವೆ ಸಚಿವ ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಮತ್ತು ಎ ಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪನಿಗೆ ಭೂಮಿಯನ್ನು ವರ್ಗಾಯಿಸಿದ ನಂತರ ಹಲವಾರು ಜನರಿಗೆ ವಿವಿಧ ರೈಲ್ವೇ ವಲಯಗಳಲ್ಲಿ ಗ್ರೂಪ್ 'ಡಿ' ವರ್ಗದ ಉದ್ಯೋಗಗಳನ್ನು ಹಸ್ತಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com