ಪೂಂಚ್‌ನಲ್ಲಿ ಮೃತಪಟ್ಟ 3 ನಾಗರಿಕರ ಸಂಬಂಧಿಕರಿಗೆ ಪರಿಹಾರ, ಉದ್ಯೋಗ ಘೋಷಿಸಿದ ಕಾಶ್ಮೀರ ಸರ್ಕಾರ

ಪೂಂಚ್ ಜಿಲ್ಲೆಯ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೃತಪಟ್ಟ ಮೂವರು ನಾಗರಿಕರ ಸಂಬಂಧಿಕರಿಗೆ ಜಮ್ಮು ಮತ್ತು ಕಾಶ್ಮೀರ ಆಡಳಿತ ಶನಿವಾರ ಪರಿಹಾರ ಮತ್ತು ಉದ್ಯೋಗವನ್ನು ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಪೂಂಚ್ ಜಿಲ್ಲೆಯ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೃತಪಟ್ಟ ಮೂವರು ನಾಗರಿಕರ ಸಂಬಂಧಿಕರಿಗೆ ಜಮ್ಮು ಮತ್ತು ಕಾಶ್ಮೀರ ಆಡಳಿತ ಶನಿವಾರ ಪರಿಹಾರ ಮತ್ತು ಉದ್ಯೋಗವನ್ನು ಘೋಷಿಸಿದೆ.

ಶುಕ್ರವಾರ ನಿಗೂಢವಾಗಿ ಶವವಾಗಿ ಪತ್ತೆಯಾಗಿರುವ ಮೂವರು ವ್ಯಕ್ತಿಗಳನ್ನು ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸೇನೆ ವಶಕ್ಕೆ ಪಡೆದಿತ್ತು ಎಂದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಪಕ್ಷಗಳು ಆರೋಪಿಸಿವೆ.

ಪೂಂಚ್ ಜಿಲ್ಲೆಯ ಬಫ್ಲಿಯಾಜ್‌ನಲ್ಲಿ ನಿನ್ನೆ ಮೂವರು ನಾಗರಿಕರ ಸಾವು ವರದಿಯಾಗಿದೆ. ವೈದ್ಯಕೀಯ-ಕಾನೂನು ವಿಧಿವಿಧಾನಗಳನ್ನು ನಡೆಸಲಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರಾಡಳಿತ ಪ್ರದೇಶದ ಮಾಹಿತಿ ಮತ್ತು PR ವಿಭಾಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

"ಸರ್ಕಾರ, ಮೃತ ಪ್ರತಿಯೊಬ್ಬರಿಗೂ ಪರಿಹಾರವನ್ನು ಘೋಷಿಸಿದೆ ಮತ್ತು ಮೃತರ ಸಂಬಂಧಿಕರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದಾಗಿ ಘೋಷಿಸಿದೆ" ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

ಶಸ್ತ್ರಸಜ್ಜಿತ ಭಯೋತ್ಪಾದಕರು ಗುರುವಾರ ಮಧ್ಯಾಹ್ನ ಪೂಂಚ್‌ನ ಸುರನ್‌ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಡೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್‌ನಲ್ಲಿ ಸೇನೆಯ ಎರಡು ವಾಹನಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದರು.

ನಂತರ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಬೃಹತ್ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com