ಮತ ಹಂಚಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸೂಚನೆ

2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಪಕ್ಷದ ಮತ ಹಂಚಿಕೆ ಪ್ರಮಾಣವನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸಂಘಟನೆಯ ನಾಯಕರುಗಳಿಗೆ ಸೂಚನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಪಕ್ಷದ ಮತ ಹಂಚಿಕೆ ಪ್ರಮಾಣವನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸಂಘಟನೆಯ ನಾಯಕರುಗಳಿಗೆ ಸೂಚನೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳು ಹಾಗೂ ರಾಜ್ಯಾಧ್ಯಕ್ಷರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಅಮಿತ್ ಶಾ ಬಿಜೆಪಿ ಕಾರ್ಯಕ್ಷಮತೆ ವಿಪಕ್ಷಗಳಿಗೆ ದಿಗ್ಭ್ರಮೆಗೊಳಿಸುವಂತಿರಬೇಕು ಎಂದು ಕರೆ ನೀಡಿದ್ದಾರೆ. 

ಬಿಜೆಪಿ ವಿರುದ್ಧ INDIA  ಮೈತ್ರಿಕೂಟ ಒಟ್ಟಾಗಿದ್ದು, 2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಬಂದಿದ್ದ ಮತ ಹಂಚಿಕೆಯ ಪ್ರಮಾಣಕ್ಕಿಂತಲೂ ಈ ಬಾರಿ ಮತ ಹಂಚಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಾಗಬೇಕು ಎಂದು ಪ್ರಧಾನಿ ಪದಾಧಿಕಾರಿಗಳು, ರಾಜ್ಯಾಧ್ಯಕ್ಷರುಗಳಿಗೆ ಸೂಚನೆ ನೀಡಿದ್ದಾರೆ. 

ಕಳೆದ ಚುನಾವಣೆಯಲ್ಲಿ ಪಕ್ಷಕ್ಕೆ ಶೇ.37 ರಷ್ಟು ಮತಗಳು ಬಂದಿತ್ತು, ಎನ್ ಡಿಎ ಮೈತ್ರಿಕೂಟಕ್ಕೆ ಶೇ.45 ರಷ್ಟು ಮತಗಳು ದಕ್ಕಿತ್ತು. 2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತನ್ನ ಮತಗಳನ್ನು ಶೇಕಡಾ 50 ಕ್ಕೆ ಏರಿಸಲು ನಿರಂತರವಾಗಿ ಶ್ರಮಿಸುತ್ತಿದೆ ಮತ್ತು ಅನೇಕ ಚುನಾವಣೆಗಳಲ್ಲಿ ಈ ಸಾಧನೆಯಲ್ಲಿ ಯಶಸ್ವಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com