ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್‌; 3 ಮಾವೋವಾದಿಗಳು ಹತ

ಛತ್ತೀಸ್‌ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಪೊಲೀಸ್ ಎನ್ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್‌
ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್‌

ರಾಯ್ಪುರ: ಛತ್ತೀಸ್‌ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಪೊಲೀಸ್ ಎನ್ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಭಾನುವಾರ ಸಂಜೆ 5:30 ರ ಸುಮಾರಿಗೆ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಕಾಟೇಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ದಬ್ಬಕುನ್ನ ಗ್ರಾಮದ ಬಳಿಯ ಬೆಟ್ಟದ ಮೇಲೆ ಮಾವೋವಾದಿಗಳ ಇರುವಿಕೆ ಪತ್ತೆ ಮಾಡಿದ್ದು, ಈ ವೇಳೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.

ತುಮಕ್‌ಪಾಲ್ ಮತ್ತು ದಬ್ಬಕುನ್ನಾ ನಡುವಿನ ಅರಣ್ಯದ ಬೆಟ್ಟದಲ್ಲಿ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿ ನಿಲ್ಲಿಸಿದ ನಂತರ, ಸಮವಸ್ತ್ರ ಧರಿಸಿದ್ದ ಮೂವರು ಪುರುಷ ಮಾವೋವಾದಿಗಳ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಎನ್‌ಕೌಂಟರ್ ಸ್ಥಳದಿಂದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಐಜಿ ತಿಳಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com