ರಾಜಸ್ಥಾನ: ಚಿರಂಜೀವಿ ಆರೋಗ್ಯ ವಿಮಾ ಯೋಜನೆ ರದ್ದುಗೊಳಿಸಲು ಬಿಜೆಪಿ ಸರ್ಕಾರ ಸಿದ್ಧತೆ
ಜೈಪುರ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಜಾರಿಗೆ ತರಲಾಗಿದ್ದ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯನ್ನು ರದ್ದುಗೊಳಿಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.
ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ನಾಗರಿಕರಿಗೆ 25 ಲಕ್ಷ ರೂಪಾಯಿಗಳ ವಿಮಾ ರಕ್ಷಣೆಯನ್ನು ಒದಗಿಸುವ ಈ ಯೋಜನೆಯ ಬದಲು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಚಿರಂಜೀವಿ ಯೋಜನೆ ರದ್ದು ಮಾಡುವ ಆದೇಶ ಇನ್ನಷ್ಟೇ ಬರಬೇಕಿದ್ದರೂ, ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚಿರಂಜೀವಿ ಸ್ಕೀಮ್ ಪೋರ್ಟಲ್ ಮುಚ್ಚುವ ಹಂತದಲ್ಲಿದ್ದು, ಆಯುಷ್ಮಾನ್ ಭಾರತ್ ಮುಖ್ಯಮಂತ್ರಿ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ 1.42 ಕೋಟಿ ಕುಟುಂಬಗಳಿಗೆ ಹೊಸ ಕಾರ್ಡ್‌ಗಳನ್ನು ವಿತರಿಸಲು ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ಜಿಲ್ಲೆಗೆ 5 ರಿಂದ 15 ಲಕ್ಷ ಕಾರ್ಡ್‌ಗಳನ್ನು ತಯಾರಿಸುವ ಗುರಿಯನ್ನು ನಿಗದಿಪಡಿಸಲಾಗಿದ್ದು, ಇ-ಕೆವೈಸಿ ಗುರಿಗಳನ್ನು ಸಹ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ