ದೇಶ

ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಟೀಕೆ: ಕಾಂಗ್ರೆಸ್ ಸಂಸದನ ವಿರುದ್ಧ ಪ್ರಕರಣ

ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಟೀಕೆಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನ ಸಂಸದ ವಿರ್ಜಿ ತುಮ್ಮರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಟೀಕೆ: ಕಾಂಗ್ರೆಸ್ ಸಂಸದನ ವಿರುದ್ಧ ಪ್ರಕರಣ
ಪ್ರಧಾನಿ ಮೋದಿ
Published On :

ಅಹ್ಮದಾಬಾದ್: ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಟೀಕೆಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನ ಸಂಸದ ವಿರ್ಜಿ ತುಮ್ಮರ್ ವಿರುದ್ಧ ಪ್ರಕರಣ ದಾಖಲಾಗಿದೆ. 

ಗುಜರಾತ್ ನ ಅಮ್ರೇಲಿ ಜಿಲ್ಲೆಯಲ್ಲಿ ಸೋಮವಾರ  ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಮಾನಹಾನಿಕರ ಟೀಕೆ ಮಾಡಿದ್ದಾರೆ. ಆದರೆ, ಯಾರನ್ನೂ ನೋಯಿಸುವುದು ನನ್ನ ಉದ್ದೇಶವಲ್ಲ, ಸಾರ್ವಜನಿಕರಿಗಾಗಿ ಧ್ವನಿ ಎತ್ತುವುದಾಗಿದೆ ಎಂದು ಎಂದು ತುಮ್ಮರ್ ಹೇಳಿದ್ದಾರೆ.

ದೂರಿನ ಆಧಾರದ ಮೇಲೆ, ಅಮ್ರೇಲಿ ನಗರ ಪೊಲೀಸರು ತುಮ್ಮರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮತ್ತು ಉದ್ದೇಶಪೂರ್ವಕ ಅವಮಾನಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) 499, 500 ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ ಪಿ ಭಂಡಾರಿ ತಿಳಿಸಿದ್ದಾರೆ.

ಡಿ.22 ರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ಸಂಸದ, ಮೋದಿ ಅವರನ್ನು ದಲಾಲ್ (ಮಧ್ಯವರ್ತಿ) ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿಯ ಅಮ್ರೇಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮೆಹುಲ್ ಧೋರಾಜಿಯಾ ದೂರು ನೀಡಿದ್ದರು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.