'ಅಜಾತಶತ್ರು' ವಾಜಪೇಯಿ ಜನ್ಮದಿನ: 'ಸದೈವ್ ಅಟಲ್' ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 99ನೇ ಜನ್ಮದಿನ ಅಂಗವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಅಟಲ್ ಬಿಹಾರಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸುತ್ತಿರುವ ಪ್ರಧಾನಿ ಮೋದಿ.
ಅಟಲ್ ಬಿಹಾರಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸುತ್ತಿರುವ ಪ್ರಧಾನಿ ಮೋದಿ.

ನವದೆಹಲಿ: ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 99ನೇ ಜನ್ಮದಿನ ಅಂಗವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಅನುರಾಗ್ ಠಾಕೂರ್, ಅಶ್ವಿನಿ ವೈಷ್ಣವ್, ಜಿತೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ತಮ್ಮ ಗೌರವವನ್ನು ಸಲ್ಲಿಸಿದರು.

ಇದಕ್ಕೂ ಮೊದಲು ಟ್ವೀಟ್ ಮೂಲಕ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ದೇಶದ ಎಲ್ಲಾ ಜನತೆಯ ಪರವಾಗಿ, ಮಾಜಿ ಪ್ರಧಾನಿ ಗೌರವಾನ್ವಿತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಗೌರವವನ್ನು ಸಲ್ಲಿಸುತ್ತಿದ್ದೇನೆ. ವಾಜಪೇಯಿಯವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣದ ವೇಗವನ್ನು ಹೆಚ್ಚಿಸುವಲ್ಲಿ ನಿರತರಾಗಿದ್ದರು. ಭಾರತಮಾತೆ ಕುರಿತು ಅವರಲ್ಲಿದ್ದ ಸಮರ್ಪಣೆ ಮತ್ತು ಸೇವೆಯು ಸ್ಫೂರ್ತಿಕರವಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com