ಅಲಿಗಢ: ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮಸೀದಿಯೊಂದರ ಗೋಡೆಗಳ ಮೇಲೆ ʼಜೈ ಶ್ರೀರಾಮ್ʼ ಎಂಬ ಘೋಷಣೆಗಳನ್ನು ಬರೆಯಲಾಗಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ಅಲಿಗಢ್‌ನ ದೆಹಲಿ ಗೇಟ್ ಮಸೀದಿಯೊಂದರ ʼಜೈ ಶ್ರೀರಾಮ್ʼ ಎನ್ನುವ ಬರಹವನ್ನು ಬರೆಯಲಾಗಿದೆ. ಆ ಬಳಿಕ ಗೋಡೆಯನ್ನು ಧ್ವಂಸ ಮಾಡಲಾಗಿದೆ. ಈ ಘಟನೆಯ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ನಂತರ ಸಮಾಜವಾದಿ ಪಕ್ಷದ (ಎಸ್‌ಪಿ) ನಿಯೋಗವು ಪೊಲೀಸರನ್ನು ಭೇಟಿ ಮಾಡಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮುಂದಿನ ವರ್ಷ ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆ ಸಾಧ್ಯತೆ
ಈ ಬಗ್ಗೆ ಔಪಚಾರಿಕ ದೂರು ದಾಖಲಿಸಲಾಗಿದೆ. ಶೀಘ್ರದಲ್ಲಿ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಮೃಗಾಂಕ್ ಶೇಖರ್ ಪಾಠಕ್ ತಿಳಿಸಿದ್ದಾರೆ.
ನಿಯೋಗದಲ್ಲಿದ್ದ ಸಮಾಜವಾದಿ ಪಕ್ಷದ ಮುಖಂಡ ಮನೋಜ್ ಯಾದವ್ ಅವರು ಮಾತನಾಡಿ, ಕೆಲವು ಸಮಾಜ ವಿರೋಧಿಗಳು ಇಂತಹ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ನಗರದ ವಾತಾವರಣವನ್ನು ಹಾಳು ಮಾಡಿದ್ದಾರೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
Advertisement