ಕಾಶ್ಮೀರಿ ನಾಗರೀಕರ ಸಾವು: 'ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ'; ಸೇನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಿವಿಮಾತು

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ನಾಗರಿಕರ ಅನುಮಾನಾಸ್ಪದ ಸಾವುಗಳ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಗೆ ದೇಶವನ್ನು ಮಾತ್ರವಲ್ಲದೆ ದೇಶವಾಸಿಗಳ ಹೃದಯವನ್ನೂ ಗೆಲ್ಲಬೇಕು ಎಂದು ಹೇಳಿದ್ದಾರೆ. ಇನ್ನಾದರೂ ಜಾಗೃತರಾಗಬೇಕು ಎಂದು ಹೇಳಿದ್ದಾರೆ.
ರಾಜನಾಥ ಸಿಂಗ್
ರಾಜನಾಥ ಸಿಂಗ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ನಾಗರಿಕರ ಅನುಮಾನಾಸ್ಪದ ಸಾವುಗಳ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಗೆ ದೇಶವನ್ನು ಮಾತ್ರವಲ್ಲದೆ ದೇಶವಾಸಿಗಳ ಹೃದಯವನ್ನೂ ಗೆಲ್ಲಬೇಕು ಎಂದು ಹೇಳಿದ್ದಾರೆ. ಇನ್ನಾದರೂ ಜಾಗೃತರಾಗಬೇಕು ಎಂದು ಹೇಳಿದ್ದಾರೆ.

'ದೇಶವನ್ನು ಶತ್ರುಗಳಿಂದ ರಕ್ಷಿಸುವುದಷ್ಟೇ ಅಲ್ಲ, ಜನರ ಮನ ಗೆಲ್ಲುವ ಹೊಣೆಗಾರಿಕೆಯೂ ಸೇನೆಯ ಮೇಲಿದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಸೇನೆಯನ್ನುದ್ದೇಶಿಸಿ ಮಾತನಾಡಿದ ಅವರು, 'ಈ ದೇಶವು ನಿಮ್ಮೆಲ್ಲರಿಗೂ ಋಣಿಯಾಗಿದೆ. ಮಾತೃಭೂಮಿಯ ಸೇವೆಯಲ್ಲಿ ನಿಮ್ಮ ತ್ಯಾಗವು ಅಪ್ರತಿಮವಾಗಿದೆ. ಅದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಸರ್ಕಾರ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ನಾವು ಯಾವಾಗಲೂ ಇರುತ್ತೇವೆ. ನಾವು ನಿಮಗೆ ಭರವಸೆ ನೀಡುತ್ತೇವೆ. ನಿಮ್ಮ ಕಲ್ಯಾಣವು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

ಯುದ್ಧವನ್ನು ಗೆಲ್ಲುವುದು, ಭಯೋತ್ಪಾದಕರ ವಿರುದ್ಧ ಹೋರಾಡುವುದು ನಮ್ಮ ಉದ್ದೇಶ ಎಂದು ನಾನು ನಂಬುತ್ತೇನೆ. ಆದರೆ ಅದೇ ಸಮಯದಲ್ಲಿ ದೇಶವಾಸಿಗಳ ವಿಶ್ವಾಸವನ್ನು ಗೆಲ್ಲುವ ಜವಾಬ್ದಾರಿಯೂ ನಿಮ್ಮ ಹೆಗಲ ಮೇಲಿದೆ ಎಂದು ರಾಜನಾಥ ಸಿಂಗ್ ಹೇಳಿದರು.

ರಕ್ಷಣಾ ಸಚಿವರನ್ನು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಉತ್ತರ ಕಮಾಂಡ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಸ್ವಾಗತಿಸಿದರು.

ಕಳೆದ ಗುರುವಾರ ರಜೌರಿಯಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದರು. ನಂತರ ಸೇನೆಯು ಮೂವರು ಸ್ಥಳೀಯ ಯುವಕರನ್ನು ವಿಚಾರಣೆಗಾಗಿ ಕರೆದೊಯ್ದಿತ್ತು. ನಂತರ ಅವರು ಶವವಾಗಿ ಪತ್ತೆಯಾಗಿದ್ದರು. ಇದು ಸ್ಥಳೀಯ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com