ದೇಶದಲ್ಲಿ ಒಟ್ಟಾರೆ 109 JN1 ಪ್ರಕರಣ ಪತ್ತೆ; ಇಂದು 529 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 529 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 529 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 529 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ  4,50,10,189 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,093ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,340ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ  4,44,72,756ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಓಮಿಕ್ರಾನ್ ಉಪತಳಿ JN.1 ವೈರಸ್: ದೇಶದಲ್ಲಿ ಒಂದೇ ದಿನ 108 ಕೇಸ್ ಪತ್ತೆ
ಈ ನಡುವೆ ಮಹಾಮಾರಿ ಕೊರೋನಾ ವೈರಸ್​ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದೆ.

ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ ಹೆಚ್ಚಾಗತೊಡಗಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 109 ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ದೇಶದ ಒಟ್ಟು 8 ರಾಜ್ಯಗಳಲ್ಲಿ (ಗೋವಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಗುಜರಾತ್, ರಾಜಸ್ಥಾನ್) ರೂಪಾಂತರಿ ವೈರಸ್ JN.1 ಪತ್ತೆಯಾಗಿದ್ದು, ಈ ಪೈಕಿ ಗುಜರಾತ್ ರಾಜ್ಯದಲ್ಲಿ ಅತೀ ಹೆಚ್ಚು 36 ಪ್ರಕರಣಗಳು ಪತ್ತೆಯಾಗಿವೆ.

ಉಳಿದಂತೆ ಕರ್ನಾಟಕದಲ್ಲಿ 34, ಗೋವಾ 14, ಮಹಾರಾಷ್ಟ್ರ 9, ಕೇರಳ 6, ರಾಜಸ್ಥಾನ4, ತಮಿಳುನಾಡು 4 ಮತ್ತು ತೆಲಂಗಾಣದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com