ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರು ಸಾಧ್ಯತೆ: TMC

ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೋಲ್ಕತಾ: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.

ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಮೂಲಗಳು ಮಾಹಿತಿ ನೀಡಿದ್ದು, 'ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜನವರಿಯಲ್ಲಿ ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಿದೆ. 

ಟಿಎಂಸಿ ಮೂಲಗಳ ಪ್ರಕಾರ, ಜನವರಿ 22 ರಂದು ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಬ್ಯಾನರ್ಜಿ ಅಥವಾ ಪಶ್ಚಿಮ ಬಂಗಾಳ ಸರ್ಕಾರ ಅಥವಾ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎನ್ನಲಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ಟಿಎಂಸಿ ಪಕ್ಷದ ಹಿರಿಯ ನಾಯಕರೊಬ್ಬರು, "ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿ ಭಾಗವಹಿಸುವ ಪ್ರಶ್ನೆಯೇ ಇಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ" ಎಂದು ತಿಳಿಸಿದ್ದಾರೆ.

ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು 6,000 ಕ್ಕೂ ಹೆಚ್ಚು ಜನರು ಭವ್ಯವಾದ ಶ್ರೀರಾಮ ಮೂರ್ತಿ 'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇನ್ನು ಈಗಾಗಲೇ ಈ ಕಾರ್ಯಕ್ರಮಕ್ಕೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI-M)-ಮಾರ್ಕ್ಸ್‌ವಾದಿ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಪಕ್ಷವು ಮಂಗಳವಾರ ಹೇಳಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com