ಆಂಧ್ರ ಪ್ರದೇಶ ರಾಜಕೀಯಕ್ಕೆ ಮತ್ತೋರ್ವ ಕ್ರಿಕೆಟಿಗ ಎಂಟ್ರಿ: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು!

ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು
ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು

ಹೈದ್ರಾಬಾದ್: ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ವಿಜಯವಾಡದಲ್ಲಿ ಆಂಧ್ರ ಪ್ರದೇಶ ಮುಖ್ಯ ಮಂತ್ರಿ ವೈಎಸ್ ಜಗನ್ ರೆಡ್ಡಿ, ಡೆಪ್ಯುಟಿ ಸಿಎಂ ನಾರಾಯಣ ಸ್ವಾಮಿ, ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಅವರ ಸಮ್ಮುಖದಲ್ಲಿ ಅಂಬಾಟಿ ರಾಯುಡು ವೈಎಸ್‌ಆರ್ ಕಾಂಗ್ರೆಸ್ ಪಾರ್ಟಿಯನ್ನು ಅಧಿಕೃತವಾಗಿ ಸೇರಿದರು.

ಭಾರತೀಯ ಖ್ಯಾತ ಕ್ರಿಕೆಟಿಗ ಅಂಬಾಟಿ ತಿರುಪತಿ ರಾಯುಡು ಅವರು ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು ಎಂದು ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಂತರ ರಾಯುಡು 2023ರಲ್ಲಿ ಕ್ರಿಕೆಟ್‌ನಿಂದ ನಿವೃತ್ತರಾದರು. ಆಂಧ್ರಪ್ರದೇಶ ಮೂಲದ ಅವರು ದೇಶೀಯ ಕ್ರಿಕೆಟ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಟೀಂ ಇಂಡಿಯಾ ಪರ ಕೂಡ ಆಡಿದ್ದರು. 37 ವರ್ಷದ ಅಂಬಾಟಿ ರಾಯುಡು ಅವರು ರಾಜಕಾರಣ ಸೇರುವುದಾಗಿ ಕಳೆದ ಜೂನ್ ತಿಂಗಳಲ್ಲಿ ಘೋಷಣೆ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com