ರಾಮ ಮಂದಿರ ಉದ್ಘಾಟನೆಯಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಕಾಂಗ್ರೆಸ್

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ "ಸೂಕ್ತ...
ಸೋನಿಯಾ ಗಾಂಧಿ - ಮಲ್ಲಿಕಾರ್ಜುನ ಖರ್ಗೆ
ಸೋನಿಯಾ ಗಾಂಧಿ - ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ "ಸೂಕ್ತ ಸಮಯದಲ್ಲಿ" ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.

ಸಮಾರಂಭಕ್ಕೆ ಗಾಂಧಿ ಮತ್ತು ಖರ್ಗೆ ಅವರನ್ನು ಆಹ್ವಾನಿಸಲಾಗಿದೆ ಎಂದು ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಇಂದು ಸುದ್ದಿಗಾರರಿಗೆ ತಿಳಿಸಿದರು.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿದ್ದು, ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು ಎಂದು ಅವರು ಹೇಳಿದರು.

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಜನವರಿ 22 ರಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000 ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com