ರೈಲ್ವೆ ನಿಲ್ದಾಣ ನಂತರ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಅಯೋಧ್ಯೆ(ಉತ್ತರ ಪ್ರದೇಶ): ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ಇದಕ್ಕೂ ಮುನ್ನ, ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧ್ಯಕ್ಷ ಸಂಜೀವ್ ಕುಮಾರ್ ಅವರು 20 ತಿಂಗಳ ದಾಖಲೆ ಸಮಯದಲ್ಲಿ ಈ ವಿಮಾನ ನಿಲ್ದಾಣ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ ಎಂದು ದೃಢಪಡಿಸಿದರು.
ಉತ್ತರ ಪ್ರದೇಶಕ್ಕೆ 15,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ದು, ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು 11,100 ಕೋಟಿ ರೂಪಾಯಿಗಳ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಕಾಮಗಾರಿಗಳಿಗೆ ಸಂಬಂಧಿಸಿದ ಸುಮಾರು 4,600 ಕೋಟಿ ರೂಪಾಯಿಗಳ ಯೋಜನೆಗಳು ಸೇರಿವೆ.
ಪ್ರಧಾನಿಯವರ ಈ ಭೇಟಿಯು ಅಯೋಧ್ಯೆಯ ರಾಮಮಂದಿರದ 'ಪ್ರಾಣ ಪ್ರತಿಷ್ಠಾ' ಅಥವಾ ಶಂಕುಸ್ಥಾಪನೆ ಸಮಾರಂಭದ ಮುಂಚಿತವಾಗಿದೆ. ದೇವಾಲಯವು ಪ್ರಸ್ತುತ ಇಲ್ಲಿ ನಿರ್ಮಾಣ ಹಂತದಲ್ಲಿದ್ದು, ಜನವರಿ 22 ರಂದು ಮಹಾಮಸ್ತಕಾಭಿಷೇಕ ಸಮಾರಂಭ ನಡೆಯಲಿದ್ದು, ಪ್ರಧಾನ ಮಂತ್ರಿಗಳು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ