ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 743 ಕೇಸ್ ಪತ್ತೆ, 7 ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 225 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 225ಕ್ಕೂ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 225 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 225ಕ್ಕೂ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಈ ಮೂಲಕ ಈವರೆಗೆ  4,50,12,431 ಮಂದಿಗೆ ಕೋವಿಡ್ ತಗುಲಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 7 ಮಂದಿ ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,33,358ಕ್ಕೆ ಏರಿಕೆಯಾಗಿದೆ.

ಮೃತಪಟ್ಟಿರುವ 7 ಮಂದಿಯ ಪೈಕಿ ಕೇರಳದಲ್ಲಿ ಮೂರು, ಕರ್ನಾಟಕ ಎರಡು ಮತ್ತು ಛತ್ತೀಸ್‌ಗಢ ಮತ್ತು ತಮಿಳುನಾಡಿನಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ 98.81ರಷ್ಟಿದ್ದು, ಈವರೆಗೆ  4,44,75,076 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.67 ಕೋಟಿಗೂ ಅಧಿಕ ಮಂದಿಗೆ ಲಸಿಕೆಗಳನ್ನು ವಿತರಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com