ಅಯೋಧ್ಯಾ ಧಾಮ್ ರೈಲು ನಿಲ್ದಾಣ' ಉದ್ಘಾಟನೆ: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಇಂದು ಶನಿವಾರ ಅಯೋಧ್ಯೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ನಂತರ ಉತ್ತರ ಪ್ರದೇಶದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಅಯೋಧ್ಯೆ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ಪ್ರಧಾನಿ ಮೋದಿ ರೋಡ್ ಶೋ
ಅಯೋಧ್ಯೆ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ಪ್ರಧಾನಿ ಮೋದಿ ರೋಡ್ ಶೋ

ಅಯೋಧ್ಯಾ: ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಇಂದು ಶನಿವಾರ ಅಯೋಧ್ಯೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ನಂತರ ಉತ್ತರ ಪ್ರದೇಶದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಅಯೋಧ್ಯೆ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ನಂತರ ಸುಮಾರು 15 ಕಿಲೋ ಮೀಟರ್ ದೂರ ಮೋದಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಅಪಾರ ಜನಸ್ತೋಮ ರಸ್ತೆಯ ಇಕ್ಕೆಲಗಳಲ್ಲಿ ಸೇರಿತ್ತು. ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ಜನರತ್ತ ಕೈ ಬೀಸುತ್ತಾ ಸಾಗಿದರು. 

ಪ್ರಧಾನಮಂತ್ರಿಯವರು ತಮ್ಮ ರೋಡ್‌ಶೋ ಮಾರ್ಗದಲ್ಲಿ ಸಾಂಸ್ಕೃತಿಕ ತಂಡಗಳ ಪ್ರದರ್ಶನಗಳನ್ನು ವೀಕ್ಷಿಸಿದರು ಮತ್ತು ಒಂದು ಹಂತದಲ್ಲಿ ಅವರತ್ತ ಕೈಬೀಸಲು ತಮ್ಮ ವಾಹನದ ಬಾಗಿಲನ್ನು ತೆರೆದು ನಿಂತರು. 

ಮೋದಿಯವರ ಆಗಮನ ಸ್ವಾಗತವನ್ನು ಟ್ವೀಟ್ ಮಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ಶ್ರೀ ಅಯೋಧ್ಯಾ ಧಾಮದಲ್ಲಿ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು" ಎಂದು ಬರೆದುಕೊಂಡಿದ್ದಾರೆ. ರೋಡ್‌ಶೋ ನಂತರ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಪ್ರಧಾನಿ ಉದ್ಘಾಟಿಸಿದರು. 

ಉದ್ಘಾಟನೆಗಳ ಜೊತೆಗೆ, ಮೋದಿ ಅವರು ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಮೋದಿ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಉತ್ತರ ಪ್ರದೇಶಕ್ಕೆ 15,700 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು 11,100 ಕೋಟಿ ರೂಪಾಯಿಗಳ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಕಾಮಗಾರಿಗಳಿಗೆ ಸಂಬಂಧಿಸಿದ ಸುಮಾರು 4,600 ಕೋಟಿ ರೂಪಾಯಿಗಳ ಯೋಜನೆಗಳು ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com