16ನೇ ಕೇಂದ್ರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಅರವಿಂದ್ ಪನಗಾರಿಯಾ ನೇಮಕ

ನೀತಿ ಆಯೋಗದ ಮಾಜಿ ಅಧ್ಯಕ್ಷ ಅರವಿಂದ್ ಪನಗಾರಿಯಾ ಅವರನ್ನು 16ನೇ ಕೇಂದ್ರ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. 2015 ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು.
ಅರವಿಂದ್ ಪನಗಾರಿಯಾ
ಅರವಿಂದ್ ಪನಗಾರಿಯಾ

ನವದೆಹಲಿ: ನೀತಿ ಆಯೋಗದ ಮಾಜಿ ಅಧ್ಯಕ್ಷ ಅರವಿಂದ್ ಪನಗಾರಿಯಾ ಅವರನ್ನು 16ನೇ ಕೇಂದ್ರ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. 

ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ ಅವರು ಆಯೋಗದ 'ಮುಂಗಡ ಕೋಶ'ದ ವಿಶೇಷ ಕರ್ತವ್ಯಾಧಿಕಾರಿಯಾಗಿರುತ್ತಾರೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. 

2015 ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು. ಅರವಿಂದ್ ಪನಗಾರಿಯಾ ಅವರು ಭಾರತ-ಅಮೆರಿಕನ್ ಪ್ರಮುಖ ಆರ್ಥಿಕ ತಜ್ಞ ಎಂದು ಗುರುತಿಸಿಕೊಂಡಿದ್ದಾರೆ. 

ಮಾಧ್ಯಮ ವರದಿಗಳ ಪ್ರಕಾರ, ಪನಗಾರಿಯಾ ಅವರು ಈ ವರ್ಷದ ಆರಂಭದಲ್ಲಿ 2026ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆ ಎಂದು ಹೇಳಿದ್ದರು. 

'ಭಾರತದ ಜಿಡಿಪಿ 2026 ರಲ್ಲಿ 5 ಟ್ರಿಲಿಯನ್ ಡಾಲರ್ ಮತ್ತು 2027 ರಲ್ಲಿ 5.5 ಟ್ರಿಲಿಯನ್ ಡಾಲರ್ ತಲುಪುತ್ತದೆ. ಇದರರ್ಥ, 2026ರ ಅಂತ್ಯದ ವೇಳೆಗೆ ಭಾರತವು ವಿಶ್ವದ ಮೂರನೇ-ಅತಿದೊಡ್ಡ ಆರ್ಥಿಕತೆಯಾಗುವತ್ತ ಮುನ್ನುಗ್ಗುವ ಅನುಕೂಲಕರ ಸೂಚನೆಗಳಿವೆ. ಅಸ್ತಿತ್ವದಲ್ಲಿರುವ ಮುನ್ಸೂಚನೆಗಳು ನಿರೀಕ್ಷಿಸುವುದಕ್ಕಿಂತ ಮುಂಚಿತವಾಗಿಯೇ ಈ ಮೈಲಿಗಲ್ಲನ್ನು ಸಾಧಿಸುವ ಎಲ್ಲಾ ಸಾಧ್ಯತೆಯಿದೆ' ಎಂದು ಖ್ಯಾತ ಅರ್ಥಶಾಸ್ತ್ರಜ್ಞರನ್ನು ಉಲ್ಲೇಖಿಸಿ ಬಿಸಿನೆಸ್ ಟುಡೇ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com