ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ದೇಶ ವಿರೋಧಿ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ (TeH) ಜಮ್ಮು ಮತ್ತು ಕಾಶ್ಮೀರವನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ದೇಶ ವಿರೋಧಿ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ (TeH) ಜಮ್ಮು ಮತ್ತು ಕಾಶ್ಮೀರವನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ.

ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಗುಂಪು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತೆಯನ್ನು ಉತ್ತೇಜಿಸಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು.

ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿಯ ಅಡಿಯಲ್ಲಿ, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ನಿಗ್ರಹಿಸಲಾಗುವುದು ಎಂದು ಹೇಳಿದರು.

'ತೆಹ್ರೀಕ್-ಎ-ಹುರಿಯತ್, ಜೆ & ಕೆ (ಟಿಹೆಚ್)ವನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ 'ಕಾನೂನುಬಾಹಿರ ಸಂಘಟನೆ' ಎಂದು ಘೋಷಿಸಲಾಗಿದೆ. ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ಈ ಸಂಘಟನೆ ತೊಡಗಿಸಿಕೊಂಡಿದೆ ಎಂದು ಅಮಿತ್ ಶಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

ಪಾಕಿಸ್ತಾನ ಪರ ಗುಂಪು ಈ ಹಿಂದೆ ಮೃತ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನೇತೃತ್ವದಲ್ಲಿತ್ತು, ಮಸರತ್ ಆಲಂ ಭಟ್ ಅವರ ಇದರ ಉತ್ತರಾಧಿಕಾರಿಯಾಗಿದ್ದ. ಆಲಂ ಭಟ್ ಭಾರತ ವಿರೋಧಿ ಮತ್ತು ಪಾಕಿಸ್ತಾನದ ಪರ ಪ್ರಚಾರಕ್ಕೆ ಹೆಸರುವಾಸಿಯಾಗಿದ್ದ.

ಮಸರತ್ ಆಲಂ ಭಟ್ ಪ್ರಸ್ತುತ ಜೈಲಿನಲ್ಲಿದ್ದಾನೆ. ಆತನ ಪಕ್ಷ ಜಮ್ಮು ಕಾಶ್ಮೀರದ ಮುಸ್ಲಿಂ ಲೀಗ್ ನ್ನು ಡಿಸೆಂಬರ್ 27 ರಂದು ನಿಷೇಧಿತ ಸಂಘಟನೆ ಎಂದು ಘೋಷಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com