ಕೋವಿಡ್-19: ದೇಶದಾದ್ಯಂತ 24 ಗಂಟೆಗಳಲ್ಲಿ 111 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 111 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,783ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಕೊರೋನಾ ವೈರಸ್ (ಸಂಗ್ರಹ ಚಿತ್ರ)
ಕೊರೋನಾ ವೈರಸ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 111 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,783ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಾದ್ಯಂತ ಈವರೆಗೆ ಕೋವಿಡ್‌ನಿಂದ 5,30,740 ಮಂದಿ ಸಾವಿಗೀಡಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೂ ಅಧಿಕವಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01 ರಷ್ಟು ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ರಾಷ್ಟ್ರೀಯ ಚೇತರಿಕೆ ದರ ಶೇ 98.81ರಷ್ಟಿದೆ. 

ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.51 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಸದ್ಯ ಈವರೆಗೆ 4,41,50,372 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ 1.19 ರಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com