ನವದೆಹಲಿ: ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಕಿರಣ್ ರಿಜಿಜು ಅವರು, ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ಲಿಖಿತ ಉತ್ತರದಲ್ಲಿ, ದೇಶದಲ್ಲಿ ಅಸ್ತಿತ್ವದಲ್ಲಿರುವ ಚುನಾವಣಾ ಪದ್ಧತಿಗಳನ್ನು ಸುಧಾರಿಸಲು ಸರ್ಕಾರ ಕಾಲಕಾಲಕ್ಕೆ ಚುನಾವಣಾ ಸುಧಾರಣೆಗಳನ್ನು ತರಲು ಕ್ರಮಗಳನ್ನು ಕೈಗೊಂಡಿದೆ ಎಂದು ರಿಜಿಜು ಹೇಳಿದ್ದಾರೆ.
"ಚುನಾವಣಾ ಸುಧಾರಣೆಗಳು ನಿರಂತರ ಪ್ರಕ್ರಿಯೆಯಾಗಿದ್ದು, ದೇಶದಲ್ಲಿ ಅಸ್ತಿತ್ವದಲ್ಲಿರುವ ಚುನಾವಣಾ ಪದ್ಧತಿಗಳನ್ನು ಸುಧಾರಿಸುವ ಸಲುವಾಗಿ, ಭಾರತ ಚುನಾವಣಾ ಆಯೋಗದ ವಿವಿಧ ಪ್ರಸ್ತಾವನೆಗಳನ್ನು ಪರಿಶೀಲಿಸಿದ ನಂತರ ಸರ್ಕಾರ ಕಾಲಕಾಲಕ್ಕೆ ವಿವಿಧ ತಿದ್ದುಪಡಿ ಕಾಯ್ದೆಗಳ ಮೂಲಕ ಅದನ್ನು ಜಾರಿಗೊಳಿಸುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.
Advertisement