
ಭೋಪಾಲ್: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು, ವಿಧ್ವಂಸಕ ರಾಜಕಾರಣ ಮಾಡುತ್ತಿರುವ ಭಾರತೀಯ ಜನತಾ ಪಕ್ಷ ಮತ್ತು ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದು, ದೆಹಲಿ ಮಾದರಿ ಆಡಳಿತ ನೀಡಲಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿ ಸಾಧನೆಯನ್ನು ಉಲ್ಲೇಖಿಸಿದ ಎಎಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರು, ಮಧ್ಯ ಪ್ರದೇಶದಲ್ಲಿ ಎಎಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ.
"ನಾವು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಮತ್ತು ನಮ್ಮ ಎಲ್ಲಾ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ" ಎಂದು ಪಾಠಕ್ ಭೋಪಾಲ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
Advertisement