ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಹಕ! ವಿಡಿಯೋ ವೈರಲ್
ನಾಡಿಯಾದ್: ಬ್ಯಾಂಕ್ ಸಿಬ್ಬಂದಿಗೆ ಗ್ರಾಹಕನೊಬ್ಬ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಬ್ಯಾಂಕ್ ಆಫ್ ಇಂಡಿಯಾ ನಾಡಿಯಾಡ್ ಶಾಖೆಯಲ್ಲಿ ಈ ಘಟನೆ ನಡೆದಿದೆ.
ಕೊನೆಗೆ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದು, ಎಸ್ ಸಿ-ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಬ್ಯಾಂಕ್ ಸಿಬ್ಬಂದಿಯನ್ನು ಮನೀಶ್ ಧಂಗರ್ ಎಂದು ಗುರುತಿಸಲಾಗಿದೆ.
ಗ್ರಾಹಕ ಸಮರ್ಥ್ ಬ್ರಹ್ಮಭಟ್ ತನ್ನಗೆ 2-3 ಬಾರಿ ಕಪಾಳಕ್ಕೆ ಹೊಡೆದು, ಒದ್ದಿರುವುದಾಗಿ ಪೊಲೀಸ್ ದೂರಿನಲ್ಲಿ ಮನೀಶ್ ಧಂಗರ್ ಆರೋಪಿಸಿದ್ದಾರೆ. ಇತರ ಬ್ಯಾಂಕ್ ಉದ್ಯೋಗಿಗಳು ಸಮರ್ಥನನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿಯ ಜೊತೆಗಿದ್ದ ಅವನ ಸ್ನೇಹಿತ ಪಾರ್ಥ್ ಕೂಡ ನನಗೆ ಒದ್ದಿರುವುದಾಗಿ ಎಂದು ಧಂಗರ್ ಪೊಲೀಸರಿಗೆ ತಿಳಿಸಿದ್ದಾರೆ.
ಬ್ಯಾಂಕ್‌ನಿಂದ ಸಾಲ ಪಡೆದಿರುವ ಆರೋಪಿ ಸಮರ್ಥ್ ತನ್ನ ಮನೆ ವಿಮಾ ಪಾಲಿಸಿಯ ಪ್ರತಿಯನ್ನು ಪ್ರಸ್ತುತಪಡಿಸಲು ನಿರಂತರವಾಗಿ ಕೇಳಿದ್ದರಿಂದ ಅಸಮಾಧಾನಗೊಂಡಿದ್ದ, ವಿಮಾ ಪಾಲಿಸಿಯನ್ನು ಸಲ್ಲಿಸುವುದಿಲ್ಲ ಎಂದು ಫೋನ್ ಮೂಲಕ ಬೆದರಿಕೆ ಹಾಕಿದ್ದ ಎಂದು ಧಂಗರ್ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ