ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ, ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕ್ರಿಶ್ಚಿಯನ್ ಮೈಕೆಲ್
ಕ್ರಿಶ್ಚಿಯನ್ ಮೈಕೆಲ್
Updated on

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ, ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಡಿಸೆಂಬರ್ 4, 2018 ರಂದು ದುಬೈನಿಂದ ಬಂಧಿಸಿ ಹಸ್ತಾಂತರಿಸಲ್ಪಟ್ಟ ಕ್ರಿಶ್ಚಿಯನ್, ಅವರು ಸಿಆರ್ ಪಿಸಿ 436A ಅನ್ನು ಒಳಗೊಂಡಿರುವ ಕಾರಣ ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠ, ಆರೋಪಿಗೆ ಜಾಮೀನು ನಿರಾಕರಿಸಿದೆ.

ಫೆಬ್ರವರಿ 2010 ರಲ್ಲಿ, ಆಗಿನ ಯುಪಿಎ ಸರ್ಕಾರ ಅವಧಿಯಲ್ಲಿ 556.262 ಮಿಲಿಯನ್ ಯುರೋ ಮೌಲ್ಯದ 12 ಆಗಸ್ಟಾ ವೆಸ್ಟ್‌ಲ್ಯಾಂಡ್ ಚಾಪರ್‌ಗಳನ್ನು ಖರೀದಿಸುಲ ಒಪ್ಪಂದಕ್ಕೆ ಸಹಿ ಹಾಕಿತ್ತು. ವಿವಿಐಪಿಗಳು ಮತ್ತು ಇತರ ಪ್ರಮುಖ ಗಣ್ಯರನ್ನು ಕರೆದೊಯ್ಯಲು ಈ ಹೆಲಿಕಾಪ್ಟರ್ ಗಳನ್ನು ಖರೀದಿಸಲಾಗುತ್ತಿದೆ.

ಆಗಸ್ಟಾ ವೆಸ್ಟ್‌ಲ್ಯಾಂಡ್‌ಗೆ ಅನುಕೂಲವಾಗುವಂತೆ ಚಾಪರ್ ವಿಶೇಷಣಗಳನ್ನು ಮೂಲ ಒಪ್ಪಂದದಿಂದ ಬದಲಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಒಟ್ಟಾರೆ ಒಪ್ಪಂದವು 3,600 ಕೋಟಿ ರೂ. ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com