ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರಾಜಸ್ಥಾನ ರೈತರು ಫೆ.10 ರೊಳಗೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಮಾಡಬೇಕು

ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಫೆಬ್ರವರಿ 10 ರೊಳಗೆ ಪರಿಶೀಲಿಸಬೇಕು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆಧಾರ್ ಸಾಂದರ್ಭಿಕ ಚಿತ್ರ
ಆಧಾರ್ ಸಾಂದರ್ಭಿಕ ಚಿತ್ರ

ಜೈಪುರ: ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಫೆಬ್ರವರಿ 10 ರೊಳಗೆ ಪರಿಶೀಲಿಸಬೇಕು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಫೆಬ್ರವರಿ 10, 2023 ರ ಮೊದಲು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು, ಮುಂದಿನ ಕಂತಿನ ಹಣ ವರ್ಗಾವಣೆಗಾಗಿ ಇ-ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಯೋಜನೆಯ ರಾಜ್ಯ ನೋಡಲ್ ಅಧಿಕಾರಿ ಮೇಘರಾಜ್ ಸಿಂಗ್ ರತ್ನು ಅವರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 2023ರ ವರೆಗೆ, ರಾಜ್ಯದಲ್ಲಿ ಈ ಯೋಜನೆಯ ಫಲಾನುಭವಿಗಳು ಶೇಕಡಾ 67 ರಷ್ಟು ಇ-ಕೆವೈಸಿ ಮಾಡಿಸಿದ್ದು, ಶೇಕಡಾ 88 ರಷ್ಟು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಮಾಡಿದ್ದಾರೆ ಎಂದು ರತ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದುವರೆಗೆ ಇ-ಕೆವೈಸಿ ಮಾಡದಿರುವ ಮತ್ತು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದ ಫಲಾನುಭವಿಗಳು ಫೆಬ್ರವರಿ 10 ರೊಳಗೆ ಮಾಡಬೇಕು ಎಂದು ರತ್ನು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com