ಭಾರತದ ಮೊದಲ ಲಿಥಿಯಂ ನಿಕ್ಷೇಪ ಕಾಶ್ಮೀರದಲ್ಲಿ ಪತ್ತೆ: ಅಧಿಕಾರಿಗಳು

ದೇಶದಲ್ಲಿ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಸರ್ಕಾರ ಗುರುವಾರ ಹೇಳಿದೆ. ಲಿಥಿಯಂ ನಾನ್-ಫೆರಸ್ ಲೋಹವಾಗಿದೆ ಮತ್ತು ಇದು ಎಲೆಕ್ಟ್ರಿಕ್ ವಾಹನ ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ದೇಶದಲ್ಲಿ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಸರ್ಕಾರ ಗುರುವಾರ ಹೇಳಿದೆ. ಲಿಥಿಯಂ ನಾನ್-ಫೆರಸ್ ಲೋಹವಾಗಿದೆ ಮತ್ತು ಇದು ಎಲೆಕ್ಟ್ರಿಕ್ ವಾಹನ ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

"ಮೊದಲ ಬಾರಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ" ಎಂದು ಗಣಿ ಕಾರ್ಯದರ್ಶಿ ವಿವೇಕ್ ಭಾರದ್ವಾಜ್ ಹೇಳಿದ್ದಾರೆ.

ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ಪರಿಶೋಧನೆಯ ನಂತರ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ.

ಈ ಹಿಂದೆ, ಗಣಿ ಸಚಿವಾಲಯವು ಉದಯೋನ್ಮುಖ ತಂತ್ರಜ್ಞಾನಗಳಿಗೆ ನಿರ್ಣಾಯಕ ಖನಿಜ ಪೂರೈಕೆ ಸರಪಳಿಯನ್ನು ಬಲಪಡಿಸಲು, ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾದಿಂದ ಲಿಥಿಯಂ ಸೇರಿದಂತೆ ಖನಿಜಗಳನ್ನು ಪಡೆಯಲು ಸರ್ಕಾರ ಹಲವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿತ್ತು.

ಪ್ರಸ್ತುತ, ಭಾರತವು ಲಿಥಿಯಂ, ನಿಕಲ್ ಮತ್ತು ಕೋಬಾಲ್ಟ್‌ನಂತಹ ಅನೇಕ ಖನಿಜಗಳಿಗೆ ಆಮದು ಮಾಡಿಕೊಳ್ಳುತ್ತಿದೆ. ನವದೆಹಲಿಯಲ್ಲಿ ನಡೆದ 62ನೇ ಸೆಂಟ್ರಲ್ ಜಿಯೋಲಾಜಿಕಲ್ ಪ್ರೋಗ್ರಾಮಿಂಗ್ ಬೋರ್ಡ್ ಸಭೆಯಲ್ಲಿ ಮಾತನಾಡಿದ ಭಾರದ್ವಾಜ್, ಮೊಬೈಲ್ ಫೋನ್ ಆಗಿರಲಿ ಅಥವಾ ಸೋಲಾರ್ ಪ್ಯಾನಲ್ ಆಗಿರಲಿ, ಎಲ್ಲೆಡೆ ನಿರ್ಣಾಯಕ ಖನಿಜಗಳು ಬೇಕಾಗುತ್ತವೆ ಎಂದು ಹೇಳಿದರು.

ಸ್ವಾವಲಂಬಿಯಾಗಲು, ದೇಶವು ನಿರ್ಣಾಯಕ ಖನಿಜಗಳನ್ನು ಪತ್ತೆ ಮಾಡುವುದು ಮತ್ತು ಅದನ್ನು ಸಂಸ್ಕರಿಸುವುದು ಬಹಳ ಮುಖ್ಯ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com