ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.
2002ರ ಗುಜರಾತ್‌ಗೆ ಸಂಬಂಧಿಸಿದ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಮತ್ತು ಬಿಬಿಸಿ ಇಂಡಿಯಾವನ್ನು ಭಾರತೀಯ ಭೂಪ್ರದೇಶದಿಂದ ಕಾರ್ಯನಿರ್ವಹಿಸದಂತೆ ಸಂಪೂರ್ಣ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯ ಮೇಲೆ ದಾಳಿ ಮಾಡುವ ಬ್ರಿಟನ್ ನ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ (ಬಿಬಿಸಿ) ಎರಡು ಭಾಗಗಳ ಸರಣಿಯು ದೇಶದಲ್ಲಿ ತೀವ್ರ ವಿವಾದ ಹುಟ್ಟುಹಾಕಿತ್ತು. ಈ ವಿವಾದಿತ ಸಾಕ್ಷ್ಯಚಿತ್ರವನ್ನುದೇಶಾದ್ಯಂತ ಹಲವು ಆಯ್ದ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗಿತ್ತು.
ಮೂಲಗಳ ಪ್ರಕಾರ, ಜನವರಿ 21 ರಂದು, ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಲಿಂಕ್‌ಗಳನ್ನು ಹಂಚಿಕೊಳ್ಳುವ ಬಹು ಯೂಟ್ಯೂಬ್ ವೀಡಿಯೊಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಕೇಂದ್ರವು ನಿರ್ದೇಶನಗಳನ್ನು ನೀಡಿದೆ.
‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದೆ. ಸಾಕ್ಷ್ಯಚಿತ್ರದ ಒಂದು ಕಂತು ಜನವರಿ 17ರಂದು ಬಿಡುಗಡೆಯಾಗಿತ್ತು. 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರೋತ್ತರ ಹತ್ಯಾಕಾಂಡವನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲವಾಗಿದ್ದರು. ಪೊಲೀಸರ ವೈಫಲ್ಯದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರ ಪಾತ್ರವೂ ಇತ್ತು ಎಂದು ಭಾರತದಲ್ಲಿ ಬ್ರಿಟನ್ ರಾಜತಾಂತ್ರಿಕರಾಗಿದ್ದ ಅಧಿಕಾರಿಗಳು ಹೇಳಿರುವುದನ್ನು ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ.
Advertisement